Friday, October 23, 2020
Home ಸುದ್ದಿ ಜಾಲ ಮಳೆ ಅಬ್ಬರ : ಕಾಂಪೌಂಡ್ ಗೋಡೆ ಕುಸಿದ ಪರಿಣಾಮ 9 ಮಂದಿ ಸಾವು

ಇದೀಗ ಬಂದ ಸುದ್ದಿ

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಮಳೆ ಅಬ್ಬರ : ಕಾಂಪೌಂಡ್ ಗೋಡೆ ಕುಸಿದ ಪರಿಣಾಮ 9 ಮಂದಿ ಸಾವು

 ಹೈದರಾಬಾದ್: ಕಳೆದ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕಾಂಪೌಂಡ್ ಗೋಡೆಯೊಂದು ಕುಸಿದು ಹತ್ತು ಮನೆಗಳ ಮೇಲೆ ಬಿದ್ದ ಪರಿಣಾಮ ಎರಡು ತಿಂಗಳ ಮಗು ಸೇರಿದಂತೆ ಒಂಬತ್ತು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶವಗಳು ಅವಶೇಷಗಳಲ್ಲಿಯೇ ಸಿಲುಕಿಕೊಂಡಿವೆ ಎಂದು ವರದಿಯಾಗಿದೆ.

ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಕಳೆದ 48 ಗಂಟೆಗಳಲ್ಲಿ ತೆಲಂಗಾಣದಲ್ಲಿ ಹನ್ನೆರಡು ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಹಲವಾರು ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳಲ್ಲಿ ಪ್ರವಾಹ ಉಂಟಾಗಿದೆ ಮತ್ತು ಕೆಲವು ತಗ್ಗು ಪ್ರದೇಶಗಳು ಮುಳುಗಿವೆ.

ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸುಮಾರು 10 ಮನೆಗಳ ಮೇಲೆ ಕಾಂಪೌಂಡ್ ಗೋಡೆ ಬಿದ್ದಿದೆ. ದುರ್ಘಟನೆಯಿಂದ ಎರಡು ಮನೆಗಳು ಸಂಪೂರ್ಣವಾಗಿ ಹಾನಿಯಾಗಿದೆ. ಒಂದೇ ಕುಟುಂಬದ ಐವರು ಸೇರಿದಂತೆ ಒಂಬತ್ತು ಜನರು ಸ್ಥಳದಲ್ಲೇ ಮೃತಪಟ್ಟರು. ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಓವೈಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ ಎಂ ಎ ಮಜೀದ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಸಂಸದ ಅಸಾದುದ್ದೀನ್ ಒವೈಸಿ, ನಾನು ಬಂಡಲಗುಡದ ಮೊಹಮ್ಮದಿಯಾ ಹಿಲ್ ನಲ್ಲಿ ಸ್ಥಳ ಪರಿಶೀಲನೆಯಲ್ಲಿದ್ದೆ. ಪಕ್ಕದ ಜಮೀನಿನ ಗೋಡೆ ಕುಸಿದು ಬಿದ್ದು 9 ಜನರು ಸಾವನ್ನಪ್ಪಿದರು ಮತ್ತು 2 ಮಂದಿ ಗಾಯಗೊಂಡರು ಎಂದಿದ್ದಾರೆ.

ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಹೈದರಾಬಾದ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

TRENDING