Tuesday, October 27, 2020
Home ಸಿನಿಮಾ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಸಿಸಿಬಿ ದಾಳಿ!

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ನಟ ವಿವೇಕ್ ಒಬೆರಾಯ್ ಮನೆ ಮೇಲೆ ಸಿಸಿಬಿ ದಾಳಿ!

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮನೆಯ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ. ವಿವೇಕ್ ಅವರ ಸಂಬಂಧಿಯಾಗಿರುವ ಆದಿತ್ಯ ಅಳ್ವಾ ಬೆಂಗಳೂರು ಡ್ರಗ್ಸ್ ಪ್ರಕರಣದ ಆರೋಪಿ. ಆತನನ್ನು ಹುಡುಕಿಕೊಂಡು ಪೊಲೀಸರು ವಿವೇಕ್ ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಆದಿತ್ಯ ವಿರುದ್ಧ ಪ್ರಕರಣ ದಾಖಲಾದಾಗಿನಿಂದ ಆತ ತಲೆಮರೆಸಿಕೊಂಡಿದ್ದಾನೆ. ಇಂದು . ಸಿಸಿಬಿ ನ್ಯಾಯಾಲಯದ ವಾರಂಟ್‌ನೊಂದಿಗೆ ವಿವೇಕ್ ಅವರ ಮನೆಯಲ್ಲಿ ಹುಡುಕಾಟ ನಡೆಸಿದೆ.

ಸಿಸಿಬಿ ಹೊರಡಿಸಿದ ಹೇಳಿಕೆಯ ಪ್ರಕಾರ, ಕಾಟನ್‌ಪೇಟೆ ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವಾ ಬೇಕಾಗಿದ್ದು ಆತ ತಲೆಮರೆಸಿಕೊಂಡಿದ್ದಾನೆ. ವಿವೇಕ್ ಒಬೆರಾಯ್ ಅವರ ಸಂಬಂಧಿಯಾಗಿರುವ ಆಳ್ವಾಗೆ ನಟ ಆಶ್ರಯ ನೀಡೀದ್ದನೆಂಬ ಮಾಹಿತಿ ಇದ್ದು ಅದಕ್ಕಾಗಿ ನಾವು ಒಬೆರಾಯ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದೇವೆ. ಇದಕ್ಕಾಗಿ ನ್ಯಾಯಾಲಯದಿಂದ ವಾರಂಟ್ ತೆಗೆದುಕೊಂಡು ಸಿಸಿಬಿ ತಂಡ ಮುಂಬೈನ ಅವರ ಮನೆಗೆ ತೆರಳಿದೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಅನೇಕ ದೊಡ್ಡದೊಡ್ಡ ಹೊಸರುಗಳು ಕೇಳಿ ಬಂದಿದೆ. ಅವುಗಳಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸಹ ಇದ್ದಾರೆ.

ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಿನಿಂದ ಪೊಲೀಸರು ಮಾದಕ ದ್ರವ್ಯ ಸೇವಿಸುವವರು, ಸರಬರಾಜುದಾರರು ಮತ್ತು ಪಾರ್ಟಿ ಆಯೋಜಕರ ವಿರುದ್ಧ ತನಿಖೆ ಕೈಗೊಂಡಿದ್ದಾರೆ.

ಸಿಸಿಬಿ ತಂಡ ಈ ಮೊದಲು ಆದಿತ್ಯ ಮನೆಯ ಮೇಲೆ ಸಹ ದಾಳಿ ಮಾಡಿತ್ತು.ಹೆಬ್ಬಾಳದ ಸಮೀಪವಿರುವ ಆದಿತ್ಯ ಮನೆ ‘ಹೌಸ್ ಆಫ್ ಲೈವ್ಸ್ ಅನ್ನು ಶೋಧಿಸಲಾಗಿದೆ.. ಈ ಆದಿತ್ಯ ಆಳ್ವಾ ಮಾಜಿ ಸಚಿವ ಜೀವರಾಜ್ ಅಳ್ವಾ ಅವರ ಪುತ್ರ. ಈತ ದೊಡ್ಡ ದೊಡ್ಡ ಪಾರ್ಟಿಗಳನ್ನು ನಡೆಸುವವನಿದ್ದನು ಎನ್ನಲಾಗಿದೆ. ಇವರ ಸಹೋದರಿ ಪ್ರಿಯಾಂಕಾ ಆಳ್ವಾ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರನ್ನು ಮದುವೆಯಾಗಿದ್ದರು.

ದಿ ನ್ಯೂಸ್24 ಕನ್ನಡ

TRENDING