Friday, October 23, 2020
Home ಬೆಂಗಳೂರು ಜೆಡಿಎಸ್ ಮುಗಿಸಲು ಕಾಂಗ್ರೆಸ್ ನಾಯಕರು ಪಣತೊಟ್ಟಿದ್ದಾರೆ:ಎಚ್.ಡಿ ಕುಮಾರಸ್ವಾಮಿ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಜೆಡಿಎಸ್ ಮುಗಿಸಲು ಕಾಂಗ್ರೆಸ್ ನಾಯಕರು ಪಣತೊಟ್ಟಿದ್ದಾರೆ:ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಉಪ ಚುನಾವಣೆಗೆ ಇನ್ನೂ ಕೇವಲ ಮೂರು ವಾರಗಳ ಸಮಯ ಮಾತ್ರ ಇದೆ. ಇದೇ ವೇಳೆ ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಹರಿ ಹಾಯ್ದಿದ್ದಾರೆ.

ಒಂದು ವಾರದಲ್ಲಿ ಎರಡು ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕಿಡಿ ಕಾರಿದ್ದಾರೆ. ಜೆಡಿಎಸ್ ಮುಗಿಸಲು ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಜೆಡಿಎಸ್ 7 ಶಾಸಕರನ್ನು ಕರೆದುಕೊಂಡರು, ಆದರೂ ಜೆಡಿಎಸ್ ಇನ್ನೂ ಸಮರ್ಥವಾಗಿದೆ ಎಂದ ಅವರು ಜೆಡಿಎಸ್ ಸಮಾಧಿ ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಕೂಡಲೇ ಸಮಾಜದ (ಒಕ್ಕಲಿಗ) ಮುಖಂಡರನ್ನು ಸೆಳೆಯುವ ಯತ್ನ ಮಾಡಿರುವವರಿಗೆ ಹಿಂದೆ ಯಾಕೆ ಸಮಾಜ ನೆನಪಾಗಲಿಲ್ಲ’ ಎಂದು ಡಿ.ಕೆ. ಶಿವಕುಮಾರ್ ಹೆಸರು ಹೇಳದೇ ಪ್ರಶ್ನಿಸಿದರು ‘ಈ ಹಿಂದೆ ಅವರು ಯಾರಿಗೆ ರಕ್ಷಣೆ ಕೊಟ್ಟಿದ್ದಾರೆ. ಸಮಾಜದವರ ಕಷ್ಟಸುಖದಲ್ಲಿ ಭಾಗಿಯಾಗಿದ್ದರೆ ಎಂಬುದನ್ನು ಹೇಳಲಿ. ಈಗ ಅವರು ಕರೆದ
ಕೂಡಲೇ ಕಿಂದರಜೋಗಿಯ ಹಿಂದೆ ಹೋದಂತೆ ಹೋಗಲು ಅವರು ಕೊಟ್ಟ ಕಾಣಿಕೆ ಏನು?’ ಎಂದು ಕುಟುಕಿದರು.

ನಮ್ಮ ಪಕ್ಷದ ನಾಯಕರ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು, ಜೆಡಿಎಸ್‍ ಮುಗಿಸುವುದಾಗಿ ಹೇಳಿದ್ದಾರೆ. ಈ ಹಿಂದೆ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲೂ ಏಳು ಶಾಸಕರನ್ನು ನಮ್ಮ ಪಕ್ಷದಿಂದ ಸೆಳೆದಿದ್ದರು. ಕಾಂಗ್ರೆಸ್ ನಾಯಕರಿಂದ ಹೊಸ ನಾಟಕ ಶುರುವಾಗಿದ್ದು, ಇದರಿಂದ ಕೂಡ ಜನರ ಹೃದಯವನ್ನು ಗೆಲ್ಲಲಾಗದು’ ಎಂದರು

ಇತ್ತೀಚೆಗೆ ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. ಹೀಗಾಗಿ ಶಿರಾ ಮತ್ತು ಆರ್ ಆರ್ ನಗರದಲ್ಲಿ ಬಿಜೆಪಿ ಜೊತೆ ಜೆಡಿಎಸ್ ನೇರ ಹೋರಾಟವಿಲ್ಲ ಎಂಬುದು ಸ್ಪಷ್ಟ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

TRENDING