Wednesday, October 28, 2020
Home ಜಿಲ್ಲೆ ಬೆಂಗಳೂರು ಆರ್ ಆರ್ ನಗರದಲ್ಲಿ ಡಿಕೆಶಿ, ಎಚ್‍.ಡಿ.ಕೆ ಆಟ ನಡೆಯೋಲ್ಲ: ಡಿಸಿಎಂ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಆರ್ ಆರ್ ನಗರದಲ್ಲಿ ಡಿಕೆಶಿ, ಎಚ್‍.ಡಿ.ಕೆ ಆಟ ನಡೆಯೋಲ್ಲ: ಡಿಸಿಎಂ

ಬೆಂಗಳೂರು:ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಅವರಿಂದ ಕ್ಷೇತ್ರದ ಜನರ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಿಲ್ಲ. ಇಲ್ಲಿ ಅವರ ಆಟ ನಡೆಯಲ್ಲ ಎಂದು ಹೇಳಿದರು.

ಕ್ಷೇತ್ರದಲ್ಲಿ ಇಂದು ಪಕ್ಷದ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ಮಾಡಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಸಮರ್ಥರಿದ್ದಾರೆ. ಆಡಳಿತ ಪಕ್ಷದ ಅಭ್ಯರ್ಥಿಗೆ ಮತ ಹಾಕುವುದರಿಂದ ಕ್ಷೇತ್ರಕ್ಕೆ ಒಳ್ಳೆಯದಾಗುತ್ತದೆ. ಈ ವಿಚಾರ ಕ್ಷೇತ್ರದ ಜನರಿಗೆ ತುಂಬಾ ಚೆನ್ನಾಗಿ ಗೊತ್ತಿದೆ ಎಂದರು.

ಬೆಂಗಳೂರು, ನಾಡಪ್ರಭು ಕೆಂಪೇಗೌಡರು ಕಟ್ಟಿದ ಮಹಾನಗರ. ಮುನಿರತ್ನ ಮುಂದಿನ ದಿನಗಳಲ್ಲಿ ನಾಡಪ್ರಭುಗಳ ಪ್ರೇರಣೆಯೊಂದಿಗೆ, ಅವರ ಕನಸು-ದೂರದೃಷ್ಟಿಗೆ ಯಾವುದೇ ಮುಕ್ಕಾಗದಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಲಿದ್ದಾರೆ. ಅವರಿಗೆ ಬೇಕಾದ ಎಲ್ಲ ಸಹಕಾರ ಸರಕಾರದಿಂದ ಸಿಗಲಿದೆ. ಕೇವಲ ಒಣ ರಾಜಕೀಯ ಮಾಡುವುದರಿಂದ, ಟೀಕೆಗಳನ್ನು ಮಾಡುತ್ತ ಕೂರುವುದರಿಂದ ಪ್ರಯೋಜನವಿಲ್ಲ. ಅಭಿವೃದ್ಧಿಯಷ್ಟೇ ಚರ್ಚೆಯ ವಿಷಯ ಎಂದು ಡಿಸಿಎಂ ಹೇಳಿದರು.

ಯಾರ ಪ್ರಭಾವವೂ ಇಲ್ಲ: ಎಚ್.ಡಿ.ಕುಮಾಸ್ವಾಮಿ ಇರಬಹುದು, ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಇರಬಹುದು ಬಂದು ಹೋಗಬಹುದು. ಆದರೆ ಈ ಕ್ಷೇತ್ರದಲ್ಲಿ ಏನು ಮಾಡಲು ಸಾಧ್ಯ ಅವರಿಂದ. ದಿನ ಬೆಳಗಾದರೆ ಜನರ ಜತೆ ನಿಂತು ಕೆಲಸ ಮಾಡುವ ಸಮರ್ಥ ಪ್ರತಿನಿಧಿ ಬೇಕು. ಮುನಿರತ್ನ ಅಂತಹ ವ್ಯಕ್ತಿ. ಚುನಾವಣೆ ಸಮಯದಲ್ಲಿ ಬಂದು ಹೋಗುವ ನಾಯಕರಿಂದ ಜನರಿಗಾಗಲಿ, ಕ್ಷೇತ್ರಕ್ಕಾಗಲಿ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಯಾವ ನಾಯಕರ ಪ್ರಭಾವವೂ ಇಲ್ಲಿ ಇಲ್ಲ. ಅಭಿವೃದ್ಧಿ ಅಂತ ಬಂದಾಗ ಬಿಜೆಪಿಯೊಂದೇ ಪರಿಹಾರ ಎಂದು ಡಾ.ಅಶ್ವತ್ಥನಾರಾಯಣ ಒತ್ತಿ ಹೇಳಿದರು.

TRENDING