Wednesday, October 28, 2020
Home ದೆಹಲಿ ದೇಶದ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ಸುಲಭ ಮತ್ತು ತ್ವರಿತವಾಗಿ ಸಿಗುವಂತಾಗಬೇಕು: ಪ್ರಧಾನಿ ಮೋದಿ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ದೇಶದ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ಸುಲಭ ಮತ್ತು ತ್ವರಿತವಾಗಿ ಸಿಗುವಂತಾಗಬೇಕು: ಪ್ರಧಾನಿ ಮೋದಿ

ನವದೆಹಲಿದೇಶದ ಪ್ರತಿ ನಾಗರಿಕನಿಗೂ ಕೋವಿಡ್ -19 ಲಸಿಕೆ ತ್ವರಿತವಾಗಿ ಮತ್ತು ಅತ್ಯಂತ ಸುಲಭವಾಗಿ ಸಿಗುವಂತಾಗಬೇಕು. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿ, ಲಸಿಕೆ ವಿತರಣೆ ಹಾಗೂ ಆಡಳಿತ ನಿರ್ವಹಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಭೆ ನಡೆಸಿದರು.

ಚುನಾವಣೆ ಮತ್ತು ವಿಪತ್ತು ನಿರ್ವಹಣೆ ಮಾಡುವ ರೀತಿಯಲ್ಲೇ ಎಲ್ಲಾ ಹಂತದ ಸರ್ಕಾರಿ ಮತ್ತು ನಾಗರಿಕರನ್ನು ಒಳಗೊಂಡ ಲಸಿಕೆ ವಿತರಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಂತೆ ಅಧಿಕಾರಿಗಳಿಗೆ ಪ್ರಧಾನಿ ಸೂಚಿಸಿದ್ದಾರೆ.

ದೈನಂದಿನ ಕೋವಿಡ್ ಪ್ರಕರಣಗಳ ಕುಸಿತ ಮತ್ತು ಚೇತರಿಕೆ ಪ್ರಮಾಣ ಹೆಚ್ಚಳವನ್ನು ಗಮನಿಸಿದ ಪ್ರಧಾನಿ, ಸಾಂಕ್ರಾಮಿಕ ರೋಗನ್ನು ತಡೆಗಟ್ಟುವ ಪ್ರಯತ್ನಗಳನ್ನು ಮುಂದುವರಿಸಬೇಕೆಂದು ಕರೆ ನೀಡಿದರು.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಮನದಲ್ಲಿಟ್ಟುಕೊಂಡು, ಆಯಾ ರಾಜ್ಯಗಳಿಗೆ ಲಸಿಕೆ ವಿತರಣೆಯಾಗಬೇಕು. ಲಾಜಿಸ್ಟಿಕ್, ವಿತರಣೆ, ಆಡಳಿತ ಸೇರಿದಂತೆ ಪ್ರತಿಯೊಂದ ಹಂತದಲ್ಲಿ ಯಾವುದೇ ಲೋಪವಾಗದಂತೆ ಕಟ್ಟು ನಿಟ್ಟಿನ ಕ್ರಮ ಜಾರಿಗೆ ತರಬೇಕು ಎಂದು ಪ್ರಧಾನಿ ಹೇಳಿದರು.

ಕೋಲ್ಡ್ ಸ್ಟೋರೇಜ್ ಸುಧಾರಿತ ಯೋಜನೆ, ವಿತರಣಾ ಜಾಲ, ಮೇಲ್ವಿಚಾರಣಾ ಕಾರ್ಯವಿಧಾನ, ಮುಂಗಡ ಮೌಲ್ಯಮಾಪನ ಮತ್ತು ಅಗತ್ಯವಿರುವ ಪೂರಕ ಸಾಧನಗಳಾದ ವೈಲ್ಸ್, ಸಿರಿಂಜ್ ಇತ್ಯಾದಿಗಳನ್ನು ತಯಾರಿಸುವ ಹಾಗೂ ವಿತರಿಸುವ ಜಾಲ ಸಮರ್ಪಕವಾಗಿರಬೇಕು ಎಂದು ಮೋದಿ ಹೇಳಿದರು.

TRENDING