Wednesday, January 27, 2021
Home ಜಿಲ್ಲೆ ಉತ್ತರ ಕನ್ನಡ ಉ.ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ಉ.ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : ಹವಾಮಾನ ಇಲಾಖೆ

 ಬೆಂಗಳೂರು : ಭಾರೀ ಮಳೆಯಿಂದಾಗಿ ತತ್ತರಿಸಿರುವ ಉತ್ತರ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯಿಂದ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಿದ್ದಿದ್ದು, ಮುಂದಿನ ಮೂರ್ನಾಲ್ಕು ದಿನ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಬೀದರ್ ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ನಷ್ಟವುಂಟಾಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಇದೇ ವೇಳೆ ಮುಂದಿನ ಮೂರ್ನಾಲ್ಕು ದಿನ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

TRENDING