Saturday, October 31, 2020
Home ಬೆಂಗಳೂರು ಆರ್ ಆರ್ ನಗರ ಉಪಚುನಾವಣೆ :40 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ-ಎಸ್'ಟಿ ಸೋಮಶೇಖರ್

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಆರ್ ಆರ್ ನಗರ ಉಪಚುನಾವಣೆ :40 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ-ಎಸ್’ಟಿ ಸೋಮಶೇಖರ್

ಮೈಸೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ 40,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ಸಚಿವ ಎಸ್’ಟಿ ಸೋಮಶೇಖರ್ ಅವರು ಶುಕ್ರವಾರ ಹೇಳಿದ್ದಾರೆ.

ಕಳೆದ ಬಾರಿ ನಡೆದ ಸಾರ್ವತ್ರಿಕ ಚುನಾವಣೆ ವೇಳೆ ಚುನಾವಣಾ ಆಯೋಗ ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದ ಮುನಿರತ್ನ ಅವರ ವಿರುದ್ಧ ಪ್ರಕಱಣ ದಾಖಲಿಸಿಕೊಂಡಿತ್ತು. ಈ ಹಿಂದೆ ಉಪಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಹಸಿರುನಿಶಾನೆ ತೋರಿ. ಮುನಿರತ್ನ ನಾಯ್ಡು ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದರಂತೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಮುನಿರತ್ನ ಅವರಿಗೆ ಬಿಗ್ ರಿಲೀಫ್ ದೊರೆತಂತಾಗಿತ್ತು.

ಚುನಾವಣೆಯಲ್ಲಿ ಮುನಿರತ್ನ ಅವರು ಸ್ಪರ್ಧಿಸುವುದನ್ನು ತಡೆಯಲು ಎಲ್ಲಾ ಬಾಗಿಲುಗಳು ಮುಚ್ಚಿರುವುದರಿಂದ ಇದೀಗ ಕೆಪಿಸಿಸಿಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿ ದಾಖಲಾಗಿದ್ದ ಎಫ್‌ಐಆರ್ ಕುರಿತು ಮಾತನಾಡುತ್ತಿದ್ದಾರೆ. ಆರ್.ಆರ್.ನಗರದಲ್ಲಿ ಡಿಕೆ ಶಿವಕುಮಾರ್ ಅವರು ಗೆಲ್ಲಲು ಸಾಧ್ಯವಿಲ್ಲ. ಹೀಗಾಗಿ ಪಿಳ್ಳೆನೆಪಗಳನ್ನು ಹುಡುಕುತ್ತಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವುದು ಚುನಾವಣಾ ಆಯೋಗದ ಕೆಲಸ ಎಂಬುದನ್ನು ಕಾಂಗ್ರೆಸ್ ತಿಳಿದುಕೊಳ್ಳಬೇಕಿದೆ ಎಂದು ಸೋಮಶೇಖರ್ ಅವರು ಹೇಳಿದ್ದಾರೆ.

ಬಿಜೆಪಿ ನಾಯಕರ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾರ ಆರೋಪಗಳು ಉಪಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಇದು ವಿಚಾರವಾಗಿದ್ದೇ ಆದರೆ, ಡಿ.ಕೆ.ಶಿವಕುಮಾರ್ ಅವರೂ ಕೂಡ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವಂತಿಲ್ಲ. ತಮ್ಮ ಕ್ಷೇತ್ರದಲ್ಲಿ ಮುನಿರತ್ನ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹೀಗಾಗಿಯೇ ಈ ಬಾರಿಯ ಆರ್.ಆರ್.ನಗರ ಉಪಚುನಾವಣೆಯಲ್ಲಿ ಭಾರೀ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆಂದು ತಿಳಿಸಿದ್ದಾರೆ.

TRENDING