Wednesday, October 28, 2020
Home ರಾಜ್ಯ ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ

ಮೈಸೂರು : ರಸಗೊಬ್ಬರ ಕೊರತೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಒಂದು ವಾರದೊಳಗೆ ಬೇಡಿಕೆಗೆ ತಕ್ಕಷ್ಟು ಯೂರಿಯಾವನ್ನು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಹೇಳಿದರು.

ಶುಕ್ರವಾರ ಕೃಷಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸಗೊಬ್ಬರ ಸಂಬಂಧ ಜಿಲ್ಲೆಯ ಕೃಷಿ ಇಲಾಖಾಧಿಕಾರಿಗಳ ಸಭೆಯಲ್ಲಿ ಮಾಹಿತಿ ಪಡೆಯಲಾಗಿದೆ. ಜಿಲ್ಲೆಯಲ್ಲಿ ಗೊಬ್ಬರದ ಸಮಸ್ಯೆ ಮಾತ್ರ ಸ್ವಲ್ಪ ಕಂಡುಬಂದಿದೆ. ಇಂದು 450 ಮೆಟ್ರಿಕ್ ಟನ್ ಗೊಬ್ಬರ ಬಂದಿದ್ದು, 500 ಮೆಟ್ರಿಕ್ ಟನ್ ಯೂರಿಯಾ ರಸ ಗೊಬ್ಬರ ನಾಳೆ ಬರಲಿದೆ. ಅಕ್ಟೋಬರ್ 18 ರಂದು 1300 ಮೆಟ್ರಿಕ್ ಟನ್ ಹಾಗೂ ಅಕ್ಟೋಬರ್ 21ರಂದು 2900 ಮೆಟ್ರಿಕ್ ಟನ್ ರಸಗೊಬ್ಬರ ಬರಲಿದ್ದು, ಯೂರಿಯಾ ರಸಗೊಬ್ಬರದ ಬೇಡಿಕೆ ಕೊರತೆ ನೀಗಲಿದೆ.

ಇನ್ನೂ ರಾಜ್ಯದಲ್ಲಿ ಬೆಳೆ ಸಮೀಕ್ಷೆ 99.02 ಸಮೀಕ್ಷೆ ಪೂರ್ಣ ಆಗಿದೆ. ರೈತರಿಂದಲೇ ಸ್ವಯಂ ಪ್ರೇರಿತವಾಗಿ 2ಕೋಟಿ 9.ಲಕ್ಷ ವ್ಯಾಪ್ತಿ ಸರ್ವೆ ಆಗಿದ್ದು, ಇನ್ನೂ ಒಂದು ಲಕ್ಷದಲ್ಲಿ ಮಾತ್ರ ಬಾಕಿ ಇದೆ. ಅದನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಉತ್ತರ ಕರ್ನಾಟಕ, ಗುಲ್ಬರ್ಗ, ಯಾದವಗಿರಿ, ಬೆಳಗಾಂನಲ್ಲಿ ಅತಿಹೆಚ್ಚು ಬೆಳೆ ಹಾನಿಯಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದಾಗಿರುವ ಬೆಳೆ ಹಾನಿ ಕುರಿತು ಪ್ರತಿಕ್ರಿಯಿಸಿ, ಬೆಳೆಹಾನಿಗೆ ಸಂಬಂಧಿಸಿದಂತೆ ಆಯಾಯ ಜಿಲ್ಲಾ ಅಧಿಕಾರಿಗಳ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಯುತ್ತಿದೆ. ಕಳೆದ ವರ್ಷ ಬೆಳೆಹಾನಿಗೆ ಇಂದು 36.57 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 800 ಕೋಟಿ ರೂ. ಹಣ ಇದ್ದು, ಎಲ್ಲಿ ಬೆಳೆ ಹಾನಿಯಾಗುತ್ತಿದೆಯೋ ಅಲ್ಲಿ ಬೇಗನೆ ಸರ್ವೇ ನಡೆಸಿ ಪರಿಹಾರ ನೀಡುವಂತೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು.

ಇದೇವೇಳೆ ಸಹಕಾರ ಹಾಗೂ ಜಿಲ್ಲಾ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಜಂಟಿ ನಿರ್ದೇಶಕ ಮಹತೇಂಶಪ್ಪ, ತಾಲ್ಲೂಕು ಕೃಷಿ ಅಧಿಕಾರಿ ಈರಣ್ಣ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

TRENDING