Wednesday, October 28, 2020
Home ಜಿಲ್ಲೆ ಕಲಬುರ್ಗಿ ಕಲಬುರಗಿ : ವಿಶೇಷ ಪ್ಯಾಕೇಜ್ ಯೋಜನೆಯಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಕಲಬುರಗಿ : ವಿಶೇಷ ಪ್ಯಾಕೇಜ್ ಯೋಜನೆಯಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿನಲ್ಲಿ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ವಿದ್ಯುತ್‍ಮಗ್ಗ ಚಟುವಟಿಕೆ ಕೈಗೊಳ್ಳಲು ಉದ್ದೇಶಿಸಿರುವ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುತ್ತಿದೆ.

ಇದಕ್ಕಾಗಿ ಆಸಕ್ತ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಘಟಕದ ವೆಚ್ಚ 3 ಲಕ್ಷ ರೂ. ಗಳಾಗಿದ್ದು, ಈ ಮೊತ್ತವನ್ನು ಹಣಕಾಸು ಸಂಸ್ಥೆಗಳಿಂದ (ಬ್ಯಾಂಕ್) ಸಾಲ ಪಡೆದು ನಂತರ ಯಂತ್ರೋಪಕರಣಗಳನ್ನು ಖರೀದಿಸಿ ಅಳವಡಿಸಿ ಉತ್ಪಾದನೆ ಪ್ರಾರಂಭಿಸಿದ ನಂತರ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ ಶೇ.90 ರಷ್ಟು ಸಹಾಯಧನವನ್ನು ಸಂಬಂಧಪಟ್ಟ ಸಾಲ ನೀಡಿದ ಬ್ಯಾಂಕುಗಳಿಗೆ ಆರ್.ಟಿ.ಜಿ.ಎಸ್. ಮೂಲಕ ಜಮಾ ಮಾಡಲಾಗುತ್ತದೆ.

ಸೀವಿಂಗ್ ಮಶೀನ್ ಖರೀದಿಗೆ ಸಹಾಯಧನ:

ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ ನಿಧಿ ಯೋಜಯಡಿ ಸೀವಿಂಗ್ ಮಶೀನ್ ಖರೀದಿಗೆ ಶೇ.50 ರಷ್ಟು ಸಹಾಯಧನ ನೀಡಲಾಗುತ್ತಿದೆ. ಇಲಾಖೆಯಿಂದ ಸೀವಿಂಗ್ ಮಶೀನ್ ಆಪರೇಟರ್ ತರಬೇತಿ ಪಡೆದ ಮಹಿಳಾ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ನಿಧಿ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆಯಡಿ ಒಂದು ಇಂಡಸ್ಟ್ರೀಯಲ್ ಸೀವಿಂಗ್ ಮಷಿನ್ ಘಟಕದ ವೆಚ್ಚ 30,000 ರೂ. ಗಳಾಗಿರುತ್ತದೆ. ಇದಕ್ಕೆ ಸರ್ಕಾರವು ಶೇ 50 ರಷ್ಟು ಗರಿಷ್ಟ 15,000 ರೂ. ಗಳ ಸಹಾಯಧನ ಪಡೆಯಬಹುದಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಎರಡನೇ ಮಹಡಿ, ಕೊಠಡಿ ಸಂಖ್ಯೆ 15, ಮಿನಿವಿಧಾನ ಸೌಧ, ಕಲಬುರಗಿ-585102 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278629 ಗೆ ಸಂಪರ್ಕಿಸಲು ಕೋರಲಾಗಿದೆ.

TRENDING