Thursday, October 22, 2020
Home ಬೆಂಗಳೂರು ನೆರೆ ಪೀಡಿತ ಪ್ರದೇಶಗಳಿಗೆ ನಾಳೆ ಕಂದಾಯ ಸಚಿವ ಭೇಟಿ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ನೆರೆ ಪೀಡಿತ ಪ್ರದೇಶಗಳಿಗೆ ನಾಳೆ ಕಂದಾಯ ಸಚಿವ ಭೇಟಿ

ಬೆಂಗಳೂರು : ನೆರೆ ಪೀಡಿತ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ್ ನಾಳೆ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗಾವಿಯಲ್ಲಿ ಸ್ಥಳೀಯ ಜನ ಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರು ಆಗಿರುವ ಅಶೋಕ್ ಅವರು ನಾಳೆ ಬೆಳಗ್ಗೆ 10.30ಕ್ಕೆ ಬೆಳಗಾವಿ ಜಿಲ್ಲೆಯ ಸಚಿವರು, ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅತಿವೃಷ್ಠಿ ಕುರಿತು ಸಭೆ ನಡೆಸಲಿದ್ದಾರೆ.

ನಂತರ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 12.30ಕ್ಕೆ ಹುಕ್ಕರಿ ತಾಲ್ಲೂಕಿನ ಹತ್ತರಗಿ, ಜಿನರಾಳ ಗ್ರಾಮಗಳಲ್ಲಿ ಬೆಳೆ ಹಾನಿ ಕುರಿತು ವೀಕ್ಷಣೆ ನಡೆಸಲಿದ್ದಾರೆ. ಹುಕ್ಕೇರಿಯಲ್ಲಿ ಮನೆ ಹಾಗೂ ಬಸ್ ನಿಲ್ದಾಣದ ಮುಖ್ಯ ರಸ್ತೆ ಹಾನಿಯನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ಎಲಿಮುನ್ನೋಳ್ಳಿಯಲ್ಲಿ ಬೆಳೆ ಹಾನಿ, ಕಲ್ಲೋಳದಲ್ಲಿ ಬ್ಯಾರೇಜ್ ಮತ್ತು ದತ್ತ ಮಂದಿರ ವೀಕ್ಷಣೆ,ಯಡೂರ, ಯಡೂರವಾಡಿ, ಇಂಗಳಿಯಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡಲಿದ್ದಾರೆ.

ಮಳೆಯಿಂದ ಕಳೆದ ಒಂದು ವಾರದಿಂದ ಪ್ರವಾಹ ಪರಿಸ್ಥಿತಿ ಇದೆ. ಲಕ್ಷಾಂತರ ಜನರ ಬದುಕು ಬೀದಿಗೆ ಬಿದ್ದಿದೆ. ಆದರೆ ಕಂದಾಯ ಸಚಿವ ಆರ್.ಅಶೋಕ್ ನೆರೆ ಸಂತ್ರಸ್ಥರ ಸಂಕಷ್ಟಕ್ಕೆ ಸ್ಪಂದಿಸುವ ಬದಲು, ಉಪಚುನಾವಣೆಯಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಎರಡು ದಿನಗಳ ಹಿಂದೆ ಕಲ್ಬುರ್ಗಿ ಜಿಲ್ಲೆಗೆ ಭೇಟಿ ನೀಡಿದ ಅಶೋಕ್ ಅವರು ಅಲ್ಪಕಾಲದ ಸಮೀಕ್ಷೆ ನಡೆಸಿ ವಾಪಾಸ್ಸಾಗಿದ್ದರು. ಇದು ಕೂಡ ಟೀಕೆಗೆ ಗುರಿಯಾಗಿತ್ತು. ಹಾಗಾಗಿ ಮತ್ತೆ ನಾಳೆ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು ಸಂಜೆಯವರೆಗೂ ಪರಿಶೀಲನೆ ನಡೆಸಲಿದ್ದಾರೆ.

TRENDING