Saturday, October 31, 2020
Home ಸಿನಿಮಾ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಕೃಷ್ಣ ನಾಡಿಗ್ ನಿಧನ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಕೃಷ್ಣ ನಾಡಿಗ್ ನಿಧನ

 ಬೆಂಗಳೂರು : ಸುಮಾರು 50 ವರ್ಷಗಳ ಕಾಲ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸೇವೆ ಸಲ್ಲಿಸಿದ ಕೃಷ್ಣ ನಾಡಿಗ್ ನಿಧನರಾಗಿದ್ದಾರೆ.

ಶನಿವಾರ ಧಾರಾವಾಹಿ ಶೂಟಿಂಗ್ ಸೆಟ್ ನಲ್ಲಿ ಹೃದಯದ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಇಂದು 11 ಗಂಟೆಗೆ ಚಾಮರಾಜನಗರ ಚಿತಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

 ಚಿಕ್ಕಮಗಳೂರು ಕಡೂರು ಯಗಟಿಯಲ್ಲಿ ಹುಟ್ಟಿ ಬೆಳೆದ ಕೃಷ್ಣ ನಾಡಿಗ್ ಅವರ ತಾಯಿ ವೀಣಾ ವಾದಕಿಯಾಗಿದ್ದರು, ತಂದೆ ಕೊಳಲು ವಾದಕರಾಗಿದ್ದರು. ಜೊತೆಗೆ ನಾಟಕ ಪ್ರೇಮಿಯೂ ಆಗಿದ್ದರು. ಹೀಗಾಗಿ ಸಹಜವಾಗಿಯೇ ನಾಡಿಗ್ ಅವರಿಗೆ ಕಲೆ, ಸಾಹಿತ್ಯ ಒಲಿದು ಬಂದಿತ್ತು.

ಚಂದನವನದಲ್ಲಿ ಗೋಸ್ಟ್ ರೈಟರ್ ಆಗಿ 60ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ, ಚಿತ್ರಕಥೆ ಬರೆದ ಹಿರಿಮೆಯ ನಾಡಿಗ್, ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ಕನ್ನಡ ಹಲವು ಚಿತ್ರಗಳಲ್ಲೂ ತಮ್ಮ ಛಾಪು ಮೂಡಿಸಿದ್ದ ನಾಡಿಗ್ ಚಿತ್ರರಂಗ – ಕಿರುತೆರೆಯ ಬರಹಗಾರರು, ನಟರಾಗಿ ಗುರುತಿಸಿಕೊಂಡು ಎಲ್ಲರ ಮನಗೆದ್ದಿದ್ದರು.

ಅದರಲ್ಲೂ ನಾಡಿಗ್ ಅವರು ತಮ್ಮ ಸ್ನೇಹಶೀಲತೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

TRENDING