Wednesday, October 21, 2020
Home ದೆಹಲಿ ದೇಶಿ ತಂತ್ರಜ್ಞಾನದ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಇದೀಗ ಬಂದ ಸುದ್ದಿ

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ...

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ...

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

ಮಾಜಿ ಶಾಸಕ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ...

 ಮಂಗಳೂರು: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಕೊಪ್ಪರಿಗೆ ಪೂಜೆಯಲ್ಲಿ ಪಾಲ್ಗೊಂಡಿದ್ದಕ್ಕೆ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ...

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ...

ದೇಶಿ ತಂತ್ರಜ್ಞಾನದ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವ ದೆಹಲಿ: ಭಾರತೀಯ ನೌಕಾಪಡೆ ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಬ್ರಹ್ಮೋಸ್ ಸೂಪರ್ಸಾನಿಕ್ಕ್ಷಿಪಣಿಯ ನೌಕಾ ಆವೃತ್ತಿಯನ್ನು ಭಾನುವಾರ ಅರಬ್ಬೀ ಸಮುದ್ರದಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ‘ಕ್ಷಿಪಣಿಯು ಉನ್ನತ ಮಟ್ಟದ ಮತ್ತು ಅತ್ಯಂತ ಸಂಕೀರ್ಣವಾದ ಕುಶಲ ತಂತ್ರಜ್ಞಾನ ಹೊಂದಿದೆ. ಬ್ರಹ್ಮೋಸ್ನಿಖರವಾಗಿ ತಲುಪಲಿದೆ. ಭಾರತೀಯ ನೌಕಾಪಡೆಯಲ್ಲಿ ವಿಧ್ವಂಸಕ ಕೃತ್ಯವನ್ನು ತಡೆಯುವ ಮತ್ತೊಂದು ಅಸ್ತ್ರವಾಗಲಿದೆಎಂದು ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ. ಅಂತ್ಯಂತ ಸಂಕೀರ್ಣವಾದ ಕುಶಲ ತಂತ್ರಜ್ಞಾನ ಹೊಂದಿರುವ, ಪಿನ್‌ – ಪಾಯಿಂಟ್ನಷ್ಟು ನಿಖರತೆಯೊಂದಿಗೆ ಗುರಿ ಸಾಧಿಸುವಂತಹ ಕ್ಷಿಪಣಿಯನ್ನು ಐಎನ್ಎಸ್ಚೆನ್ನೈನಿಂದ ಪರೀಕ್ಷಾರ್ಥವಾಗಿ ಹಾರಿಸಲಾಯಿತು.

290 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಇದಾಗಿದೆ. ಬ್ರಹ್ಮೋಸ್​ ಕ್ಷಿಪಣಿಯನ್ನ ಭಾರತ ಹಾಗೂ ರಷ್ಯಾ ಜಂಟಿಯಾಗಿ ವಿನ್ಯಾಸಗೊಳಿಸಿ, ಅಭಿವೃದ್ಧಿಪಡಿಸಿದೆ. ಇದು ಭೂ, ವಾಯು ಮತ್ತು ನೌಕಾ ರೂಪಾಂತರಗಳನ್ನು ಹೊಂದಿದೆ. ಕ್ಷಿಪಣಿಯು ಮ್ಯಾಕ್ 2.8 ನ ವೇಗವನ್ನು ಹೊಂದಿದ್ದು, ಇದು ಶಬ್ದದ ವೇಗಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. : ಹಬ್ಬಗಳ ವೇಳೆ ನಿರ್ಲಕ್ಷ್ಯ ತೋರಿದರೆ ಒಂದೇ ತಿಂಗಳಲ್ಲಿ 26 ಲಕ್ಷ ಪ್ರಕರಣ: ತಜ್ಞರ ಸಮಿತಿ ಎಚ್ಚರಿಕೆ

ಬ್ರಹ್ಮೋಸ್ ನೌಕಾ ಆವೃತ್ತಿ ಕ್ಷಿಪಣಿಯ ಪರೀಕ್ಷೆ ಯಶಸ್ವಿಗೊಳಿಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ), ಬ್ರಹ್ಮೋಸ್ ಏರೋಸ್ಪೇಸ್ ಮತ್ತು ಭಾರತೀಯ ನೌಕಪಡೆಯ ಸಿಬ್ಬಂದಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದರು.
ಸೆಪ್ಟೆಂಬರ್ 30 ರಂದು ಒಡಿಶಾದ ಬಾಲಸೋರ್‌ನಲ್ಲಿ 400 ಕಿ.ಮೀ ದೂರದಲ್ಲಿರುವ ಗುರಿಗಳನ್ನು ತಲುಪಬಲ್ಲ ವಿಸ್ತೃತ ಶ್ರೇಣಿಯ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಪರೀಕ್ಷಿಸಿದ ಕೆಲವೇ ದಿನಗಳ ನಂತರ ಇಂದು ಮತ್ತೊಂದು ಪರೀಕ್ಷೆ ನಡೆಸಲಾಗಿದೆ.

ಸದ್ಯ ಲಡಾಖ್‌ನ ಭಾರತ-ಚೀನಾ ಗಡಿಯಲ್ಲಿ ಚೀನಾದೊಂದಿಗೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಭಾರತ ಕಳೆದ ಎರಡು ತಿಂಗಳುಗಳಲ್ಲಿ ಶಸ್ತ್ರಾಸ್ತ್ರಗಳ ಸರಣಿ ಪರೀಕ್ಷೆ ನಡೆಸಿದೆ.

TRENDING