Friday, November 27, 2020
Home ರಾಜ್ಯ ರಾಜ್ಯ ಸರ್ಕಾರದಿಂದ ಪ್ರವಾಹ ಸಂತ್ರಸ್ತರಿಗೆ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ರಾಜ್ಯ ಸರ್ಕಾರದಿಂದ ಪ್ರವಾಹ ಸಂತ್ರಸ್ತರಿಗೆ ಸಿಹಿಸುದ್ದಿ

 ಬೆಳಗಾವಿ : ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಈಗಾಗಲೇ ಪರಿಹಾರ ಪಡೆದವರು ಮನೆ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅತಿವೃಷ್ಟಿ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ(ಅ.19) ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಒಂದು ವೇಳೆ ತಂತ್ರಾಂಶದಲ್ಲಿ ಬೋಗಸ್ ಎಂಟ್ರಿ ಆಗಿರುವುದು ಕಂಡುಬಂದರೆ ರದ್ದುಪಡಿಸಿ, ಉಳಿದ ಎಲ್ಲ ಕೆಟಗರಿ ಮನೆಗಳ ಸಮೀಕ್ಷೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಕೂಡಲೇ ಪರಿಹಾರ ಬಿಡುಗಡೆಗೊಳಿಸಿ, ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ತಿಳಿಸಿದರು.

ಅತಿವೃಷ್ಟಿ ಹಾಗೂ ಪ್ರವಾಹದಿಂದ ನೊಂದವರಿಗೆ ಎಲ್ಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಕಳೆದ ಬಾರಿ ಪ್ರವಾಹದಲ್ಲಿ ಉಂಟಾಗಿರುವ ಹಾನಿಯನ್ನು ಇದುವರೆಗೆ ಭರಿಸಿಲ್ಲ ಹಾಗೂ ಮನೆ ನಿರ್ಮಾಣಕ್ಕೆ ಪರಿಹಾರ ನೀಡಿಲಗಲ ಎಂಬ ದೂರುಗಳು‌ ವ್ಯಾಪಕವಾಗಿ ಕೇಳಿಬರುತ್ತಿವೆ. ಈಗಾಗಲೇ ಸರ್ಕಾರ ಹಣ ಬಿಡುಗಡೆ ಮಾಡಿದ್ದಾಗ್ಯೂ ಇದುವರೆಗೆ ಎಲ್ಲ ಕುಟುಂಬಗಳಿಗೆ ಪರಿಹಾರ ಯಾಕೆ ತಲುಪಿಲ್ಲ ಎಂದು ಜಿಲ್ಲಾಧಿಕಾರಿಗಳನ್ನು ಸಚಿವರು ಪ್ರಶ್ನಿಸಿದರು.

ಜಿಲ್ಲೆಯಲ್ಲಿ ಹಾನಿಯಾಗಿರುವ ಸುಮಾರು 6000 ಮನೆಗಳ ನಿರ್ಮಾಣಕ್ಕೆ ಪರಿಹಾರ‌ ಬಿಡುಗಡೆ ಮಾಡಿದಾಗ್ಯೂ ಇದುವರೆಗೆ ಕೇವಲ 500 ಮನೆಗಳ ನಿರ್ಮಾಣ ಆಗಿರುವ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಪರಿಹಾರ ನೀಡಲಾದ ಮನೆಗಳ ನಿರ್ಮಾಣಕ್ಕೆ ಮೊದಲು ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಮನೆ ನಿರ್ಮಿಸಿಕೊಳ್ಳದಿದ್ದರೆ ಅಂತಹವರ ಪರಿಹಾರ ರದ್ದುಗೊಳಿಸಬೇಕು ಹಾಗೂ ಮನೆ ನಿರ್ಮಾಣದಲ್ಲಿ ಪ್ರಗತಿ ಸಾಧಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಅಶೋಕ ತಿಳಿಸಿದರು.

ಪ್ರತಿವರ್ಷ ಪ್ರವಾಹದಿಂದ ಬಾಧಿತಗೊಳ್ಳುವ ಹಳ್ಳಿಗಳನ್ನು ಸ್ಥಳಾಂತರಿಸಲು ಅವಕಾಶಗಳಿವೆ. ಆದರೆ ಈಗಾಗಲೆ ನಿರ್ಮಿಸಿ ಕೊಟ್ಟಿರುವ ಮನೆಗಳಿಗೆ ಜನ ಹೊಗದೇ, ಮೊದಲು ಇದ್ದ ಮನೆಗಳಲ್ಲೇ ವಾಸಿಸುತ್ತಿದ್ದಾರೆ. ಬೆಳೆ ಪರಿಹಾರದ ಸಮಿಕ್ಷೇಯ‌ನ್ನು ಆದಷ್ಟು ಬೇಗ ಮೂಗಿಸಿ ಪರಿಹಾರ ನೀಡಬೇಕು. ಜಿಲ್ಲಾಡಳಿತ ಪ್ರವಾಹ ನಿರ್ವಹಣೆಗೆ ಮುಂಜಾಗೃತ ಕ್ರಮ ಕೈಗೊಳಬೇಕು. ಆ ಸಂದರ್ಭದಲ್ಲಿ ಅಧಿಕಾರಿಗಳು ರಜೆ ಹಾಕದೇ ಕರ್ತವ್ಯಕ್ಕೆ ಹಾಜರಾಗಬೇಕು; ಪ್ರವಾಹ ನಿರ್ವಹಣೆ ಅನುದಾನ ದುರುಪಯೋಗ ಆಗಬಾರದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

TRENDING