Thursday, December 3, 2020
Home ಜಿಲ್ಲೆ ಕೊಪ್ಪಳ ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ ಸಿಎಂ ಆಗಬಹುದು: ಸಿ.ಟಿ ರವಿ

ಇದೀಗ ಬಂದ ಸುದ್ದಿ

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಚಾಮರಾಜನಗರ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ: ಡಿ.ಸಿ....

 ಚಾಮರಾಜನಗರ: ಯಡಬೆಟ್ಟದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಳಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯವುಳ್ಳ ₹125 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ...

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ ಸಿಎಂ ಆಗಬಹುದು: ಸಿ.ಟಿ ರವಿ

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಟಿ ರವಿ, ವಿಜಯಪುರ ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.

ಬಸನಗೌಡ ಪಾಟೀಲ್ ಯತ್ನಾಳರಷ್ಟು ಬುದ್ಧಿವಂತ ನಾನಲ್ಲ, ನಾನು ಪಕ್ಷ ಹಾಗೂ ಜನರ ನೆಲೆಯಲ್ಲಿ ಕೆಲಸ ಮಾಡುವವನು. ಕರ್ನಾಟಕ ಏಕೀಕರಣದ ಆಶಯಕ್ಕೆ ಮಣ್ಣು ಹಾಕುವ ಕೆಲಸ ಮಾಡಬಾರದು. ಸಮಗ್ರ ಕರ್ನಾಟಕಕ್ಕೆ ನಾಯಕತ್ವ ಕೊಡುವ ಸಾಮರ್ಥ್ಯ ಉತ್ತರ ಕರ್ನಾಟಕಕ್ಕೆ ಇದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಾಸಕ ಯತ್ನಾಳ್ ಅವರೊಂದಿಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ ಎಂದರು.

ಉಪ ಚುನಾವಣೆ ಪ್ರಚಾರದಲ್ಲಿ ಮೀರ್ ಸಾಧಿಕ್ ಪದ ಬಳಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಸಿ.ಟಿ.ರವಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಒಂದು ಸ್ಥಾನ ಗೆದ್ದಿದೆ. ಒಂದು ಬಂದಿದ್ದಕ್ಕೆ ಸಭೆ ಸೇರಿ ಕಾಂಗ್ರೆಸ್ ಜೊತೆ ಸೇರಿ ಹಾಳಾಗಿದ್ದೇವೆ, ಜೆಡಿಎಸ್ ಜೊತೆ ಸೇರಿ ಹಾಳಾಗಿದ್ದೇವೆ ಎಂದು ಹೇಳಿದವರು ಯಾರು? ಎಂದು ಪ್ರಶ್ನಿಸಿದರು.

ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಇದಕ್ಕೆ ಸೂಕ್ತವಾಗಿ ಸರ್ಕಾರ ಸ್ಪಂದಿಸುತ್ತಿದೆ. ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡಿದ್ದಾರೆ, ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತಿದ್ದಾರೆ ಎಂದರು.

ಪ್ರವಾಹ ಪ್ರದೇಶಗಳಲ್ಲಿ ತ್ವರಿತ ಗತಿಯಲ್ಲಿ ಪರಿಹಾರ ನೀಡುವ ಕೆಲಸವನ್ನು ಎಲ್ಲರೂ ಮಾಡುತ್ತಿದ್ದಾರೆ. ಇಂದು ಮುಖ್ಯಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ವೀಕ್ಷಣೆ ಮಾಡುತ್ತಿದ್ದು, ನೆರೆ ಪರಿಹಾರದ ನಷ್ಟವನ್ನು ಕೇಂದ್ರ ಸರ್ಕಾರ ನೀಡುವ ವಿಶ್ವಾಸವಿದೆ ಎಂದು ಭರವಸೆ ನೀಡಿದರು.

ವಿಪಕ್ಷ ಕಾಂಗ್ರೆಸ್ ನವರು ನಿರೀಕ್ಷಿತ ಮಟ್ಟದಲ್ಲಿ ರಾಜ್ಯ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ವಿರೋಧಿಸುತ್ತಿದ್ದು, ಅವರದ್ದು ಗ್ರಾಮೋಫೋನ್ ಕ್ಯಾಸೆಟ್ ಇದ್ದಂತೆ, ಯುಪಿಎ ಕೊಟ್ಟ ಪರಿಹಾರಕ್ಕಿಂದ ನಾಲ್ಕು ಪಟ್ಟು ಹೆಚ್ಚು ಎನ್‍ಡಿಎ ಸರ್ಕಾರ ನೀಡಿದೆ ಎಂದು ಸಿ.ಟಿ ರವಿ ತಿರುಗೇಟು ನೀಡಿದರು.

TRENDING