Tuesday, December 1, 2020
Home ಬೆಂಗಳೂರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ಬೆಂಬಲಿಗರಿಂದ ಹಲ್ಲೆ!

ಇದೀಗ ಬಂದ ಸುದ್ದಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ಬೆಂಬಲಿಗರಿಂದ ಹಲ್ಲೆ!

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗ ವೇಲು ನಾಯ್ಕರ್ ಮತ್ತು 30ಕ್ಕೂ ಹೆಚ್ಚು ಗೂಂಡಾಗಳು ಹಲ್ಲೆ ನಡೆಸಿದ್ದಾರೆ.

ಬೂತ್ ಮಟ್ಟದಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಣೆ ನಡೆಸಲು ಸಂಗ್ರಹಿಸಿದ್ದ ಮಾಹಿತಿಯ ಪುಸ್ತಕ ಕಿತ್ತು ಹರಿದು ಹಾಕಿದ್ದಾರೆ. ಅಲ್ಲದೆ ಮಾಜಿ ಸಂಸದರಾದ ನಾರಾಯಣ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರಚಾರಕ್ಕೂ ವೇಲು ನಾಯ್ಕರ್ ಮತ್ತು ಸಹಚರರು ಬೆದರಿಕೆ ಹಾಕಿ ಅಡ್ಡಿಯುಂಟು ಮಾಡಿದ್ದಾರೆ.

ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಖಂಡಿಸಿ ಹಾಗೂ ವೇಲು ನಾಯ್ಕರ್ ಗಡಿಪಾರು ಮಾಡುವಂತೆ ಒತ್ತಾಯಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ನಾಯಕರ ಪ್ರತಿಭಟನೆ ನಡೆಸಿದ್ದಾರೆ.

ಹಿರಿಯ ನಾಯಕರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದ ಧೃವ ನಾರಾಯಣ್, ಮಾಜಿ ಶಾಸಕ ಬಾಲರಾಜ್, ಮಾಜಿ ಬಿಬಿಎಂಪಿ ಸದಸ್ಯ ಶಿವರಾಜ್, ಕಾಂಗ್ರೆಸ್ ಮುಖಂಡ ಆರಾಧ್ಯ,ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್,ಕಾನೂನು ವಿಭಾಗದ ಸೂರ್ಯ ಮುಕುಂದರಾಜ್, ಚೇತನ್ ಶಂಕರಪ್ಪ ಮತ್ತು ನೂರಾರು ಕಾರ್ಯ ಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಪೊಲೀಸ್ ಠಾಣೆಗೆ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ ವೇಲು ನಾಯ್ಕರ್ ಮತ್ತು ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಉಪ ಚುನಾವಣೆಯಲ್ಲಿ ಮತದಾರ ಗುರುತಿನ ಚೀಟಿಯನ್ನು ಮುನಿರತ್ನ ಬೆಂಬಲಿಗರು ಸಂಗ್ರಹಿಸುತ್ತಿದ್ದಾರೆ. ಆಮೂಲಕ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಬೆದರಿಕೆ ಒಡ್ಡಿದ್ದಾರೆ. ಉಪ ಚುನಾವಣೆಯಲ್ಲಿ ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಬಿಜೆಪಿ ಅಭ್ಯರ್ಥಿ ಅಡ್ಡಿಯುಂಟು ಮಾಡುತ್ತಿದ್ದಾರೆಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಮನೆಮನೆಗೆ ತೆರಳಿ ಮತ ಪ್ರಚಾರ ನಡೆಸದೆ ಕ್ಷೇತ್ರದ ಮತದಾ ರರ ಜಾತಿ,ಮತಗಳ ಸಂಖ್ಯೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಗ್ರಹಿಸುತ್ತಿರುವುದು ಕಾನೂನು ಬಾಹಿರವಾಗಿದೆ. ಕ್ಷೇತ್ರದಲ್ಲಿ ಜಾತಿ ರಾಜಕೀಯದ ಮೂಲಕ ಮತಗಳನ್ನು ವಿಭಜಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಹಾಗೂ ಬೆಂಬಲಿಗರು ಆರೋಪಿಸಿದ್ದಾರೆ.

ಯಾರು ಬೆಂಬಲಿಗರು, ಗೂಂಡಾಗಳನ್ನು ಬಳಸಿಕೊಂಡು ಚುನಾವಣೆ ನಡೆಸುವುದು ಬೇಡ. ಚುನಾವಣಾ ಆಯೋಗ ಮತದಾರರಿಗೆ ಗುರುತಿನ ಚೀಟಿ ಮತ್ತು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಿದೆ. ಯಾರೂ ಮತದಾರರ ಮೇಲೆ ಒತ್ತಡ ಹೇರುವಂತಿಲ್ಲ ಎಂದು ಪೊಲೀಸರು ಎರಡೂ ಪಕ್ಷಗಳ ನಾಯಕರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

TRENDING