Thursday, November 26, 2020
Home ಅಂತರ್ ರಾಜ್ಯ TRP ಹಗರಣ; ಮಹಾರಾಷ್ಟ್ರದಲ್ಲಿ ಸಿಬಿಐ ತನಿಖೆಯನ್ನು ನಿರ್ಬಂಧಿಸಿದ ಸಿಎಂ ಉದ್ಧವ್ ಠಾಕ್ರೆ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

TRP ಹಗರಣ; ಮಹಾರಾಷ್ಟ್ರದಲ್ಲಿ ಸಿಬಿಐ ತನಿಖೆಯನ್ನು ನಿರ್ಬಂಧಿಸಿದ ಸಿಎಂ ಉದ್ಧವ್ ಠಾಕ್ರೆ

 ಮುಂಬೈ: ಆಂಗ್ಲ ಸುದ್ದಿ ಮಾಧ್ಯಮವಾದ ರಿಪಬ್ಲಿಕ್ ಟಿವಿ ಹಣ ನೀಡಿ ಟಿಆರ್​​ಪಿ ತಿರುಚಿದ ಪ್ರಕರಣ ಪ್ರಸ್ತುತ ದೇಶದಲ್ಲಿ ಅದರಲ್ಲೂ ಮಹಾರಾಷ್ಟ್ರದಲ್ಲಿ ಭಾರೀ ಸದ್ದು ಮಾಡುತ್ತಿದೆ. ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಈಗಾಗಲೇ ಅನೇಕರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ನಡುವೆ ರಿಪಬ್ಲಿಕ್ ಟಿವಿ ಸಂಪಾದಕ 46 ವರ್ಷದ ಅರ್ನಾಬ್ ಗೋಸ್ವಾಮಿ ಸಹ ಬಂಧನದ ಭೀತಿ ಎದುರಿಸುತ್ತಿದ್ದಾರೆ. ನಡುವೆ ಕೇಂದ್ರ ಸರ್ಕಾರ ಟಿಆರ್ಪಿ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಈಗಾಗಲೇ ತನಿಖೆಯನ್ನು ಆರಂಭಿಸಿರುವ ಸಿಬಿಐ ಪೊಲೀಸರು ಪ್ರಕರಣದ ಸಂಬಂಧ ಎಫ್ಐಆರ್ ಸಹ ದಾಖಲಿಸಿದ್ದಾರೆ. ಆದರೆ, ಎಫ್ಐಆರ್ ದಾಖಲಾದ ಮರುದಿನವೇ ಹೊಸ ಆದೇಶ ಹೊರಡಿಸಿರುವ ಮಹಾರಾಷ್ಟ್ರ ಸರ್ಕಾರ, ‘ರಾಜ್ಯದಲ್ಲಿ ಟಿಆರ್ಪಿ ಹಗರಣದ ಪ್ರಕರಣಗಳ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ)ನೀಡಿದ್ದ ಒಪ್ಪಿಗೆಯನ್ನು ಹಿಂತೆಗೆದುಕೊಂಡಿದೆರಾಜ್ಯ ಸರ್ಕಾರದ ಆದೇಶದಂತೆ, ಸಿಬಿಐ ಈಗ ಕೇಸ್ಟುಕೇಸ್ ಆಧಾರದ ಮೇಲೆ ತನಿಖೆ ನಡೆಸಲು ಅನುಮತಿ ಪಡೆಯಲು ಬದ್ಧವಾಗಿರುತ್ತದೆಎಂದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಮಹಾರಾಷ್ಟ್ರ ಸರ್ಕಾರದ ಉಪ ಕಾರ್ಯದರ್ಶಿ ಕೈಲಾಸ್ ಗಾಯಕ್​ವಾಡ್​ ಹೊರಡಿಸಿದ ಆದೇಶದಲ್ಲಿ, “ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯ್ದೆ 1956 ರ ಸೆಕ್ಷನ್ 6 ರ ಪ್ರಕಾರ ಅಧಿಕಾರವನ್ನು ಚಲಾಯಿಸುವಾಗ ಮಹಾರಾಷ್ಟ್ರ ಸರ್ಕಾರವು ದೆಹಲಿ ವಿಶೇಷ ಪೊಲೀಸ್ ಪಡೆಯ (ಸಿಬಿಐ) ಸದಸ್ಯರಿಗೆ ನೀಡಿದ್ದ ಒಪ್ಪಿಗೆಯನ್ನು ಹಿಂಪಡೆಯುತ್ತದೆ’ ಎಂದು ಆದೇಶ ಹೊರಡಿಸಲಾಗಿದೆ. ಆದರೆ, ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯ್ದೆಯಿಂದ ಪ್ರಕರಣಗಳ ತನಿಖೆ ನಡೆಸಲು ಸಿಬಿಐ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದೂ ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಫೆಬ್ರವರಿ 22, 1989 ರ ಕಾನೂನಿನ ಪ್ರಕಾರ ಸಿಬಿಐ ಯಾವುದೇ ರಾಜ್ಯದಲ್ಲಿ ತನ್ನ ಅಧಿಕಾರವನ್ನು ಚಲಾಯಿಸಲು ಆಯಾ ರಾಜ್ಯಗಳ ಒಪ್ಪಿಗೆಯೂ ಅಗತ್ಯ. ಹೀಗಾಗಿ ಈ ಮುನ್ನ ಮಹಾರಾಷ್ಟ್ರ ಸರ್ಕಾರ ನೀಡಿದ ಸಾಮಾನ್ಯ ಒಪ್ಪಿಗೆಯಿಂದ ಸಿಬಿಐ ಈ ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದಲ್ಲಿ ಇಳಿಯುವುದು ಸಾಧ್ಯವಿಲ್ಲ. ಸಿಬಿಐ ತನಿಖೆಗೆ ನಡೆಸಲು ಮಹಾರಾಷ್ಟ್ರ ಸರ್ಕಾರದಿಂದ ಅಧಿಕೃತವಾಗಿ ಕಾನೂನಾತ್ಮಕ ಒಪ್ಪಿಗೆಯನ್ನೂ ಪಡೆಯಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ.

ಟಿಆರ್​ಪಿ ಹಗರಣ ಮಹಾರಾಷ್ಟ್ರದಲ್ಲಿ ಸದ್ದು ಮಾಡಿತ್ತು ಪರಿಣಾಮ ಅಲ್ಲಿನ ಅಪರಾಧ ವಿಭಾಗದ ಪೊಲೀಸರು ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದರು. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಸಿಬಿಐ ಸಹಾಯವನ್ನು ಕೇಳಿರಲಿಲ್ಲ. ಆದರೆ, ಇದೇ ಪ್ರಕರಣವನ್ನು ಲಖನೌದ ಹಜರತ್​ಗಂಜ್ ಪೊಲೀಸ್ ಠಾಣೆಯಲ್ಲೂ ದಾಖಲಿಸಲಾಗಿತ್ತು. ಹೀಗಾಗಿ ಉತ್ತರಪ್ರದೇಶ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿಕೊಂಡ ನಂತರ ಕೇಂದ್ರ ಸರ್ಕಾರ ಟಿಆರ್​ಪಿ ಹಗರಣದ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ನೀಡಲು ಮುಂದಾಗಿತ್ತು.

ಆದರೆ, ಉತ್ತರಪ್ರದೇಶ ಸರ್ಕಾರಕ್ಕೆ ಇದರಲ್ಲಿ ಒಮ್ಮತ ಇಲ್ಲ. ಈ ಕುರಿತು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಗುರುವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಸಹ ಟಿಆರ್​​ಪಿ ಹಗರಣ ತನಿಖೆಯನ್ನು ಸಿಬಿಐಗೆ ನೀಡಿದ್ದ ಒಪ್ಪಿಗೆಯನ್ನು ಹಿಂದಕ್ಕೆ ಪಡೆದಿವೆ ಎಂದು ವರದಿಯಾಗಿದೆ.
ಈ ಹಿಂದೆ ಖ್ಯಾತ ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನೂ ಸಹ ಮಹಾರಾಷ್ಟ್ರ ಪೊಲೀಸರು ತನಿಖೆ ನಡೆಸುತ್ತಿದ್ದರು. ಆದರೆ, ಮೃತನ ತಂದೆ ಪಾಟ್ನಾದಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಬಿಹಾರ ಸರ್ಕಾರದ ಒತ್ತಾಯದ ಮೇರೆಗೆ ಕೇಂದ್ರ ಸರ್ಕಾರ ಪ್ರಕರಣವನ್ನು ಸಿಬಿಐಗೆ ನೀಡಿತ್ತು. ಇದೀಗ ಟಿಆರ್​ಪಿ ಪ್ರಕರಣವನ್ನೂ ಅದೇ ರೀತಿ ನಿಭಾಯಿಸಲಾಗುತ್ತಿದೆ. ಆದರೆ ಟಿಆರ್​ಪಿ ಹಗರಣದ ತನಿಖೆ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸುದ್ದಿ ಸಂಸ್ಥೆ ಐಎಎನ್‌ಎಸ್ ಅಧಿಕೃತ ಮೂಲಗಳನ್ನು ಉಲ್ಲೇಖಿಸಿದೆ.

TRENDING