Tuesday, December 1, 2020
Home ಅಂತರ್ ರಾಜ್ಯ ನನ್ನ ಹೋರಾಟ ನಿತೀಶ್ ವಿರುದ್ಧ ಮಾತ್ರ, ಉಸಿರಿರುವವರೆಗೂ ಮೋದಿ ಜೊತೆಗಿರುತ್ತೇನೆ : ಚಿರಾಗ್...

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ನನ್ನ ಹೋರಾಟ ನಿತೀಶ್ ವಿರುದ್ಧ ಮಾತ್ರ, ಉಸಿರಿರುವವರೆಗೂ ಮೋದಿ ಜೊತೆಗಿರುತ್ತೇನೆ : ಚಿರಾಗ್ ಪಾಸ್ವಾನ್

 ಪಾಟ್ನಾನನ್ನ ಹೋರಾಟ ಏನಿದ್ದರೂ ನಿತೀಶ್ ಕುಮಾರ್ ವಿರುದ್ಧ ಮಾತ್ರ, ಆದರೆ ನನ್ನ ಕೊನೆಯ ಉಸಿರಿರುವವರೆಗೂ ಪ್ರಧಾನಿ ಮೋದಿ ಜೊತೆಗಿರುತ್ತೇನೆ ಎಂದು ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎನ್‌ಡಿಎ ಪರ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ತಮ್ಮ ಭಾಷಣದಲ್ಲಿ ಇತ್ತಿಚಿಗೆ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಸ್ಮರಿಸಿದರು. ರಾಮ್ ವಿಲಾಸ್ ಪಾಸ್ವಾನ್ ತಮ್ಮ ಜೀವನದ ಕೊನೆಯ ಉಸಿರಿರುವವರೆಗೂ ನನ್ನ ಜೊತೆ ಇದ್ದರು ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು.

ಇದೇ ವಿಚಾರಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಿರುವ ಚಿರಾಗ್, ‘ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ತಮ್ಮ ತಂದೆಯನ್ನು ಸ್ಮರಿಸಿರುವುದಕ್ಕೆ ಧನ್ಯವಾದ ಅರ್ಪಿಸಿರುವ ಪುತ್ರ ಚಿರಾಗ್ ಪಾಸ್ವಾನ್, ನಾನೂ ಕೂಡ ಪ್ರಧಾನಿ ಅವರೊಂದಿಗೆ ನನ್ನ ಜೀವನದ ಕೊನೆಯ ಕ್ಷಣದವರೆಗೂ ಇರುತ್ತೇನೆ ಎಂದು ಭರವಸೆ ನೀಡಿದರು.

ಪ್ರಧಾನಿ ನಮ್ಮ ತಂದೆಯನ್ನು ನೆನೆದಿರುವುದು ನನಗೆ ಗೌರವದ ವಿಷಯ. ನಾನು ತುಂಬ ಭಾವುಕನಾಗಿದ್ದೇನೆ. ಅಲ್ಲದೇ ಮೋದಿ ಅವರೊಂದಿಗೆ ಗಟ್ಟಿಯಾಗಿ ನಿಲ್ಲುವ ಭರವಸೆಯನ್ನೂ ನೀಡುತ್ತೇನೆ. ನನ್ನ ಹೋರಾಟ ಏನಿದ್ದರೂ ನಿತೀಶ್ ಕುಮಾರ್ ವಿರುದ್ಧವೇ ಹೊರತು ಬಿಜೆಪಿ ವಿರುದ್ಧವಲ್ಲ. ಆದರೆ ಜೆಡಿಯು ಮಿತ್ರ ಪಕ್ಷವಾಗಿರುವುದರಿಂದ ನನ್ನ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಆದರೆ ನಾನು ಮಾತ್ರ ಬಿಜೆಪಿ ವಿರುದ್ಧ ಮಾತನಾಡುವುದಿಲ್ಲ ಎಂದು ಚಿರಾಗ್ ಪಾಸ್ವಾನ್ ಸ್ಪಷ್ಟಪಡಿಸಿದರು.

ಅಂತೆಯೇ, ನಾನು ಸಿಎಂ ಆದರೆ ನಿತೀಶ್ ಕುಮಾರ್ ರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಒಂದು ವೇಳೆ ನಾನು ಅಧಿಕಾರಕ್ಕೆ ಬಂದರೆ ಸಾತ್ ನಿಶ್ಚೇ (ಏಳು ಪರಿಹಾರಗಳು) ಯೋಜನೆಯಲ್ಲಿ ನಾನು ಹಗರಣಗಳನ್ನು ತನಿಖೆ ಮಾಡುತ್ತೇನೆ ಮತ್ತು ತಪ್ಪಿತಸ್ಥರೆಲ್ಲರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಆ ಪಟ್ಟಿಯಲ್ಲಿ ನಿತೀಶ್ ಕುಮಾರ್ ಇದ್ದರೆ ಅವರನ್ನೂ ಸಹ ಎಂದು ಚಿರಾಗ್ ಹೇಳಿದ್ದಾರೆ.

TRENDING