Monday, January 18, 2021
Home ಜಿಲ್ಲೆ ತುಮಕೂರು ನಾನೇ ಅಭ್ಯರ್ಥಿ ಎಂದು ಭಾವಿಸಿ ಮತ ಹಾಕಿ:ಮುಖ್ಯಮಂತ್ರಿ ಯಡಿಯೂರಪ್ಪ

ಇದೀಗ ಬಂದ ಸುದ್ದಿ

ನಾನೇ ಅಭ್ಯರ್ಥಿ ಎಂದು ಭಾವಿಸಿ ಮತ ಹಾಕಿ:ಮುಖ್ಯಮಂತ್ರಿ ಯಡಿಯೂರಪ್ಪ

ತುಮಕೂರು: ‘ಎಸ್‌.ಮಲ್ಲಿಕಾರ್ಜುನಯ್ಯ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರ ಯಾವುದೇ ಕಾರಣಕ್ಕೂ ಬಿಜೆಪಿ ಕೈ ತಪ್ಪದಂತೆ ಕಾರ್ಯಕರ್ತರು ಕೆಲಸ ಮಾಡಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ನಗರದಲ್ಲಿ ಶನಿವಾರ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಪರ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಮಾತನಾಡಿದರು.

‘ಬಿಜೆಪಿ ಕಾರ್ಯಕರ್ತರು ಮತದಾರರನ್ನು ಮತಗಟ್ಟೆಗೆ ಕರೆ ತಂದು ಮೊದಲ ಪ್ರಾಶಸ್ತ್ಯದ ಮತವನ್ನು ಚಿದಾನಂದಗೌಡ ಅವರಿಗೆ ಕೊಡಿಸಬೇಕು. ನಾನೇ ಅಭ್ಯರ್ಥಿ ಎಂದು ತಿಳಿಯಿರಿ’ ಎಂದರು.

‘ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಸರ್ವರ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿಯೇ ಮತ್ತೆ ಲೋಕಸಭಾ ಚುನಾವಣೆ ಎದುರಿಸಿ ಮೂರನೇ ಬಾರಿ ಪ್ರಧಾನಿಯಾಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ಭಾರತವು ವಿಶ್ವದಲ್ಲಿಯೇ ಮೊದಲ ಸ್ಥಾನದಲ್ಲಿ ಇರಬೇಕು ಎನ್ನುವ ಆಲೋಚನೆಯಿಂದ ಶಿಕ್ಷಣ ಪದ್ಧತಿಯನ್ನು ಬದಲಾಯಿಸಿದ್ದಾರೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದ ಯುವ ಸಮುದಾಯಕ್ಕೆ ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಅವಕಾಶಗಳು ಹೆಚ್ಚಲಿವೆ. ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ’ ಎಂದು ತಿಳಿಸಿದರು.

ಸಂಸದ ಜಿ.ಎಸ್.ಬಸವರಾಜ್, ಶಾಸಕರಾದ ಬಿ.ಸಿ.ನಾಗೇಶ್, ವೈ.ಎ.ನಾರಾಯಣಸ್ವಾಮಿ, ಜಿ.ಬಿ.ಜ್ಯೋತಿ ಗಣೇಶ್, ಮಸಾಲ ಜಯರಾಂ, ಮುಖಂಡರಾದ ಸೊಗಡು ಶಿವಣ್ಣ, ಹುಲಿನಾಯ್ಕರ್, ಶಿವಪ್ರಸಾದ್ ಇದ್ದರು.

TRENDING