Friday, November 27, 2020
Home ಅಂತರ್ ರಾಜ್ಯ ತಮಿಳುನಾಡು ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ತಮಿಳುನಾಡು ಪೊಲೀಸರು

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ತಮಿಳುನಾಡು ಪೊಲೀಸರು

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಥೋಲ್ ತಿರುಮಾವಾಲವನ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಖುಷ್ಬೂ ಚಿದಂಬರಂಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಚೆನ್ನೈ ಹೊರವಲಯದಲ್ಲಿರುವ ಮುತ್ತಕಾಡು ಎಂಬಲ್ಲಿ ಅವರನ್ನು ತಡೆದ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಟಿ ರಾಘವನ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದು, ಟಿಂಡಿವನಂ ಟೋಲ್ ಗೇಟ್ ಬಳಿ ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಖುಷ್ಬೂ ಟ್ವೀಟ್ ಮಾಡಿದ್ದು, ‘ಬಂಧನಕ್ಕೆ ಒಳಗಾಗಿದ್ದೇನೆ.. ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯಲಾಗುತ್ತಿದೆ. ಮಹಿಳೆಯರ ಗೌರವಕ್ಕಾಗಿ ನಮ್ಮ ಕೊನೆ ಉಸಿರಿನವರೆಗೂ ಹೋರಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ನಾವು ಅವರ ಹಾದಿಯಲ್ಲಿ ಸಾಗುತ್ತಿದ್ದೇವೆ. ಕೆಲವು ಕೆಟ್ಟ ವ್ಯಕ್ತಿಗಳ ದೌರ್ಜನ್ಯಕ್ಕೆ ನಾವು ಮಂಡಿಯೂರುವುದಿಲ್ಲ. ಭಾರತ್ ಮಾತಾ ಕಿ ಜೈ’ ಎಂದು ಹೇಳಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿರುವ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲವೇ? ನನ್ನ ಪ್ರಯಣಕ್ಕೆ ಅವಕಾಶ ನೀಡದೆ ಹಕ್ಕು ಕಸಿದುಕೊಳ್ಳಲಾಗಿದೆ. ಈ ಘಟನೆಯ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಚಿದಂಬರಂ ಸಂಸದ ಥೋಲ್ ತಿರುಮಾವಾಲವನ್ ಅವರು, ಮನುಸ್ಮೃತಿ ಹಾಗೂ ಮಹಿಳೆಯರ ಕುರಿತು ಅದರ ದೃಷ್ಟಿಕೋನದ ಬಗ್ಗೆ ವ್ಯಂಗ್ಯವಾಡಿದ್ದರು. ಸೆಪ್ಟೆಂಬರ್‌ನಲ್ಲಿ ನಡೆದ ವೆಬಿನಾರ್‌ನಲ್ಲಿ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದರು ಎಂದು ಆರೋಪಿಸಲಾಗಿದೆ.

TRENDING