Sunday, November 29, 2020
Home ಸುದ್ದಿ ಜಾಲ ಇಂದಿನಿಂದ 10 ದಿನಗಳವರೆಗೆ ತೆರೆಯಲಿದೆ ಹಾಸನಾಂಬ ದೇಗುಲ: ಭಕ್ತರಿಗಿಲ್ಲ ದರ್ಶನ ಭಾಗ್ಯ..!

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಇಂದಿನಿಂದ 10 ದಿನಗಳವರೆಗೆ ತೆರೆಯಲಿದೆ ಹಾಸನಾಂಬ ದೇಗುಲ: ಭಕ್ತರಿಗಿಲ್ಲ ದರ್ಶನ ಭಾಗ್ಯ..!

 ಕೊರೋನಾ ಈ ವರ್ಷ ಜನರ ಎಲ್ಲಾ ಖುಷಿ ಮತ್ತು ಸಂಭ್ರಮವನ್ನು ಕಸಿದುಕೊಂಡಿದೆ. ಪ್ರತೀ ವರ್ಷ ವಿಜೃಂಭಣೆಯಿಂದ ನಡೆಯುತ್ತಿದ್ದ ಹಬ್ಬಗಳು ಕೊರೋನಾ ಕಾರಣದಿಂದ ಕಳೆಗುಂದಿವೆ. ನಾಡಹಬ್ಬ ದಸರಾ ಕೂಡ ಸರಳವಾಗಿ ನಡೆದೇ ಹೋಯಿತು. ಇನ್ನು ಈ ಕೊರೋನಾ ಎಫೆಕ್ಟ್​ ಹಾಸನದ ಹಾಸನಾಂಬೆ ದರ್ಶನಕ್ಕೂ ತಟ್ಟಿದೆ. ಹೌದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನ ಜಿಲ್ಲೆಯ ಶಕ್ತಿದೇವತೆ ಹಾಸನಾಂಬೆ ಈ ಬಾರಿ ಸಾರ್ವಜನಿಕರಿಗೆ ದರ್ಶನ ನೀಡುತ್ತಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ ಇಂದಿನಿಂದ ನ. 15ರವರೆಗೆ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ.

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬ ದೇಗುಲಕ್ಕೆ ರಾಜ್ಯ ಮಾತ್ರವಲ್ಲದೇ, ವಿವಿಧ ಕಡೆಗಳಿಂದ ಅಸಂಖ್ಯಾತ ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ ಈ ಬಾರಿ ಕೊರೋನಾ ಹಿನ್ನೆಲೆ, ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಇಲ್ಲ. ದೇವಾಲಯದ ಬಾಗಿಲು ತೆರೆಯುವ ಮೊದಲ ದಿನ ಮತ್ತು ಕೊನೆಯ ದಿನ‌ ಆಹ್ವಾನಿತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳಿಗೆ ಮಾತ್ರ ಹಾಸನಾಂಬ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಿ ಕೊಡಲಾಗುತ್ತದೆ. ಉಳಿದಂತೆ ಹಾಸನಾಂಬ ದೇವರ ದರ್ಶನಕ್ಕೆ ಇನ್ಯಾರಿಗೂ ಅವಕಾಶವಿಲ್ಲ.

ಹಾಸನಾಂಬ ದೇವಿಗೆ ಸಲ್ಲುವ ಪೂಜೆ ವೀಕ್ಷಿಸಲು ಅನುಕೂಲವಾಗುವಂತೆ ಸಾರ್ವಜನಿಕರಿಗೆ ಹಾಸನ ನಗರದ 10 ಕಡೆ ಎಲ್‌ಇಡಿ ಪರದೆ ಅಳವಡಿಕೆ ಮಾಡಲಾಗಿದೆ. hasanambalive2020 ಎಂದು ಸರ್ಚ್ ಮಾಡುವ ಮೂಲಕ ಯೂಟ್ಯೂಬ್‌ನಿಂದ ಪೂಜೆಯ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ. ಈ ಬಾರಿ ಪ್ರಸಾದದ ವ್ಯವಸ್ಥೆ ಕೂಡ ಇರುವುದಿಲ್ಲ.

ಕಳೆದ ವರ್ಷ ಸುಮಾರು 5 ಲಕ್ಷ ಜನ ನೇರವಾಗಿ ಹಾಸನಾಂಬೆ ದರ್ಶನ ಪಡೆದಿದ್ದರು. ಅಂದರೆ ಕಳೆದ ವರ್ಷ ಪ್ರತಿ ದಿನ‌ ಸುಮಾರು 50 ಸಾವಿರ ಭಕ್ತರು ದೇವರ ದರ್ಶನ ಪಡೆದು ಪುನೀತರಾಗಿದ್ದರು. ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಹೆಚ್ಚು ಜನ ಬಂದರೆ ನಿಯಂತ್ರಿಸುವುದು ಕಷ್ಟ ಸಾಧ್ಯ ಎಂದು ಭಕ್ತರ ದರ್ಶನಕ್ಕೆ ಅವಕಾಶ ನೀಡಿಲ್ಲ.

ಹಾಸನಾಂಬ ದೇವಾಲಯದ ಬಾಗಿಲು ವರ್ಷಕ್ಕೊಮ್ಮೆ ತೆಗೆದರೂ, ಹಾಸನಾಂಬ ದೇವಿ ಹಲವಾರು ಪವಾಡಕ್ಕೆ ಹೆಸರು ವಾಸಿಯಾಗಿದೆ. ದೇವಾಲಯದ ಬಾಗಿಲು ಹಾಕುವಾಗ ಹಚ್ಚಿದ ದೀಪ ಮುಂದಿನ ‌ವರ್ಷ ಬಾಗಿಲು ತೆರೆದಾಗಲೂ ಆರಿರುವುದಿಲ್ಲ. ದೇವರಿಗೆ ಮುಡಿಸಿದ ಹೂವು ಬಾಡಿರುವುದಿಲ್ಲ, ದೇವರ ನೈವೇದ್ಯಕ್ಕೆ ಇಟ್ಟ ಅನ್ನ‌ ಹಳಸಿರುವುದಿಲ್ಲ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಪ್ರತೀ ವರ್ಷ ಲಕ್ಷಾಂತರ ಭಕ್ತರು ದರ್ಶನ ಪಡೆಯುತ್ತಿದ್ದರು.

ಇನ್ನು, ಇಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಿದೆ. ನವೆಂಬರ್ 5ರಿಂದ 15ರವರೆಗೆ ಹಾಸನಾಂಬೆ ದರ್ಶನ ಪಡೆಯಬಹುದಾಗಿದೆ. ಆದರೆ ಅದು ನೇರವಾಗಿ ಅಲ್ಲ.

TRENDING