Friday, January 15, 2021
Home ಜಿಲ್ಲೆ ಬಾಗಲಕೋಟೆ ಬಾಗಲಕೋಟೆ : ತೇರದಾಳ ಪುರಸಭೆ ಬಿಜೆಪಿ ಪಾಲು

ಇದೀಗ ಬಂದ ಸುದ್ದಿ

ಬಾಗಲಕೋಟೆ : ತೇರದಾಳ ಪುರಸಭೆ ಬಿಜೆಪಿ ಪಾಲು

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತೇರದಾಳ ಪುರಸಭೆಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಅನ್ನಪೂರ್ಣ ಸದಾಶಿವ ಹೊಸಮನಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತವ್ವಾ ರುದ್ರಪ್ಪಾ ಕಾಲತಿಪ್ಪಿಯವರು ಅವಿರೋಧವಾಗಿ ಆಯ್ಕೆಯಾದರು.

ಇದೇ ಸಂದರ್ಭದಲ್ಲಿ ಬಾಗಲಕೋಟೆ ಸಂಸದ ಪಿ ಸಿ ಗದ್ದಿಗೌಡರ.ತೇರದಾಳ ವಿಧಾನಸಭಾ ಕ್ಷೇತ್ರದ ಶಾಸಕ ಸಿದ್ದು ಸವದಿ. ರಬಕವಿ ಬನಹಟ್ಟಿ ತಹಸಿಲ್ದಾರ ಪ್ರಶಾಂತ ಜನಗೊಂಡ ಸೇರಿದಂತೆ ಪುರಸಭೆಯ ಬಿಜೆಪಿ ಸದಸ್ಯರು ಮತ್ತು ಕಾಂಗ್ರೆಸ್ ಸದಸ್ಯರು ಸೇರಿದಂತೆ ಮುಂತಾದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಕಾಶ ಕುಂಬಾರ
ಬಾಗಲಕೋಟೆ

TRENDING