Thursday, November 26, 2020
Home ಜಿಲ್ಲೆ ಜಿಲ್ಲಾ ಸುದ್ದಿ ಮೈಸೂರು ಅರಮನೆಯ ದೀಪಾಲಂಕಾರ, ಸೌಂಡ್ಸ್ ಅಂಡ್ ಲೈಟಿಂಗ್ ಕಣ್ತುಂಬಿಕೊಳ್ಳುವ ಭಾಗ್ಯ ಸದ್ಯಕ್ಕಿಲ್ಲ.!

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಮೈಸೂರು ಅರಮನೆಯ ದೀಪಾಲಂಕಾರ, ಸೌಂಡ್ಸ್ ಅಂಡ್ ಲೈಟಿಂಗ್ ಕಣ್ತುಂಬಿಕೊಳ್ಳುವ ಭಾಗ್ಯ ಸದ್ಯಕ್ಕಿಲ್ಲ.!

ಮೈಸೂರು: ಮೈಸೂರಲ್ಲಿ ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಕಡಿವಾಣ ಹಾಕಲು ವಾರಾಂತ್ಯ ಹಾಗೂ ರಜೆ ದಿನಗಳಲ್ಲಿ ದೀಪಾ ಲಂಕಾರ, ಸಾಮಾನ್ಯ ದಿನಗಳಂದು ನಡೆಯುತ್ತಿದ್ದ ಧ್ವನಿ ಮತ್ತು ಬೆಳಕಿನ ಕಾರ್ಯಕ್ರಮದಿಂದ ಕಂಗೊಳಿಸುತ್ತಿದ್ದ ಅರಮನೆ ಇನ್ನಷ್ಟು ದಿನ ಮಂಕಾಗಲಿದೆ. ದೀಪಾಲಂಕಾರ ಕಣ್ತುಂಬಿಕೊಳ್ಳಲು ಜನರು ಮುಗಿ ಬೀಳುವುದನ್ನು ಮನಗಂಡು ಮುಂದಿನ ಕೆಲ ದಿನಗಳವರೆಗೆ ದೀಪಾ ಲಂಕಾರ ಮಾಡದಿರಲು ನಿರ್ಧರಿಸಲಾಗಿದೆ.

ಗುಂಪು ಗೂಡುವಿಕೆಯಿಂದ ಕೊರೊನಾ ವೈರಸ್ ಹರಡುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ 200ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದಕ್ಕೆ ಕೇಂದ್ರ ಸರ್ಕಾರದ ಕೋವಿಡ್-19 ಮಾರ್ಗಸೂಚಿಯಲ್ಲಿ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಇನ್ನಷ್ಟು ದಿನ ವಾರಾಂತ್ಯ ರಜೆ ದಿನ ಹಾಗೂ ಹಬ್ಬದ ದಿನದಂದು ಅರಮನೆಯ ದೀಪಾಲಂಕಾರಕ್ಕೆ ಹಾಗೂ ಭಾನುವಾರ ಹೊರತುಪಡಿಸಿ ಉಳಿದ ದಿನಗಳಂದು ಸಂಜೆ ವೇಳೆ ಇರುತ್ತಿದ್ದ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯನ್ನು ಮತ್ತಷ್ಟು ದಿನ ಸ್ಥಗಿತಗೊಳಿಸಲು ಉದ್ದೇಶಿಸಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಿಸುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಮಾ.22ರಂದು ಕರೆ ನೀಡಿದ್ದ `ಜನತಾ ಕಫ್ರ್ಯೂ’ ದಿನದಿಂದ ಮೈಸೂರು ಅರಮನೆಯ ದೀಪಾಲಂಕಾರ ಹಾಗೂ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು.

ಅಂದಿನಿಂದ ಸುಮಾರು 6 ತಿಂಗಳು ಮಂಕಾಗಿಯೇ ಇದ್ದ ಮೈಸೂರು ಅರಮನೆ ನಾಡ ಹಬ್ಬ ದಸರಾ ಮಹೋತ್ಸವದ ವೇಳೆ ಝಗಮಗಿಸುವ ದೀಪಾಲಂಕಾರದಿಂದ ಕಂಗೊಳಿಸಿತ್ತು. ನವರಾತ್ರಿಯ ಆರಂಭ ದಿನವಾದ ಅ.17ರಿಂದ ಜಂಬೂ ಸವಾರಿ ದಿನ ಅ.26ರವರೆಗೆ ದೀಪಾಲಂಕಾರದಿಂದ ಮೈಸೂರು ಅರಮನೆ ದೀಪಾಲಂಕಾರದಿಂದ ನೋಡುಗರ ಕಣ್ಮನ ಸೆಳೆದಿತ್ತು. ಈ ವೇಳೆ ಅರಮನೆ ಆವರಣ ಪ್ರವೇಶಿಸಲು ಕೇವಲ 50 ಮಂದಿಗೆ ಮಾತ್ರ ಅವಕಾಶ ನೀಡಿದ್ದರಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ದೀಪಾಲಂಕಾರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.

ಈ ಹಿಂದೆ ವಾರಾಂತ್ಯ ರಜೆ ದಿನ ಹಾಗೂ ಹಬ್ಬದ ದಿನ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಅರಮನೆಗೆ ದೀಪಾಲಂಕಾರ ಮಾಡಲಾಗುತ್ತಿತ್ತು. ಈ ವೇಳೆ 2ರಿಂದ 3 ಸಾವಿರ ಮಂದಿ ಬಂದು ದೀಪಾಲಂಕಾರವನ್ನು ವೀಕ್ಷಿಸುತ್ತಿದ್ದರು. ಅಲ್ಲದೇ ವಾರಾಂತ್ಯ ದಿನವನ್ನು ಹೊರತುಪಡಿಸಿ ಅರಮನೆಗೆ ಧ್ವನಿ ಮತ್ತು ಬೆಳಕು ವ್ಯವಸ್ಥೆ ಮಾಡಲಾಗುತ್ತಿತ್ತು.

ಇದನ್ನು ವೀಕ್ಷಿಸಲು ಸುಮಾರು 800 ರಿಂದ 1000 ಮಂದಿ ಆಗಮಿಸುತ್ತಿದ್ದರು. ಇದನ್ನು ಮನಗಂಡು ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೂ ಅರಮನೆಗೆ ವಾರಾಂತ್ಯ ಹಾಗೂ ವಿಶೇಷ ಸಂದರ್ಭಗಳಲ್ಲಿ ದೀಪಾಲಂಕಾರ ಮಾಡದಿರಲು ನಿರ್ಧರಿಸಲಾಗಿದೆ. ಇದರೊಂದಿಗೆ ಧ್ವನಿ ಮತ್ತು ಬೆಳಕು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

TRENDING