Thursday, December 3, 2020
Home ಕೋವಿಡ್-19 ದೇಶದಲ್ಲಿ ಕಳೆದ 24 ಗಂಟೆಯಲ್ಲಿ 44,879 ಮಂದಿಗೆ ಕೊರೊನಾ, 547 ಬಲಿ

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 44,879 ಮಂದಿಗೆ ಕೊರೊನಾ, 547 ಬಲಿ

 ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಆರ್ಭಟದ ಇಳಿಮುಖದ ಸೂಚನೆಗಳು ಕಂಡುಬರುತ್ತಿವೆ. ಆದಾಗ್ಯೂ ಜನರು ಈ ಸಂದರ್ಭದಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸದೇ ಇನ್ನೂ ಕೆಲವು ದಿನಗಳ ಕಾಲ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ. 106 ದಿನಗಳ ಬಳಿಕ ಸಕ್ರಿಯ ಪ್ರಕರಣಗಳಲ್ಲಿ ಸತತ ಎರಡನೇ ದಿನ ಸಕ್ರಿಯ ಸೋಂಕು ಪ್ರಕರಣಗಳು 5 ಲಕ್ಷಕ್ಕಿಂತ ಕಡಿಮೆ ಇಳಿದಿದೆ. ಅಲ್ಲದೇ ದಿನನಿತ್ಯದ ಪಾಸಿಟಿವ್ ಕೇಸ್‍ಗಳ ಸಹ 50,000ಕ್ಕಿಂತ ಕಡಿಮೆ ಪ್ರಮಾಣದಲ್ಲಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ.

ಇದೇ ವೇಳೆ ಭಾರತದಲ್ಲಿನ ಒಟ್ಟು ಕೋವಿಡ್-19 ರೋಗಿಗಳ ಸಂಖ್ಯೆ 88 ಲಕ್ಷ ಸನಿಹವಿದ್ದು, ಈವರೆಗೆ 1.28 ಲಕ್ಷಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಸಮಾಧಾನಕರ ಸಂಗತಿ ಎಂದರೆ 81.15 ಲಕ್ಷಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿ/ಚೇತರಿಸಿಕೊಂಡು ಸಾವಿನ ಬಲೆಯಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 44,879 ಪಾಸಿಟಿವ್ ಕೇಸ್‍ಗಳು ವರದಿಯಾಗಿವೆ.

ದಿನನಿತ್ಯದ ಸಾವು ಪ್ರಕರಣದಲ್ಲಿ ಕೊಂಚ ಇಳಿಕೆ ಕಂಡುಬಂದಿದ್ದು, 24 ತಾಸುಗಳ ಅವಧಿಯಲ್ಲಿ 547 ಮಂದಿ ಸಾವಿಗೀಡಾಗಿದ್ದಾರೆ. ಇವುಗಳ ನಡುವೆಯೂ ದೇಶದಲ್ಲಿ ಸೋಂಕಿತರ ಪ್ರಮಾಣ 88 ಲಕ್ಷ ದಾಟುತ್ತಿರುವುದು ಜನರಲ್ಲಿ ಆತಂಕ ಮುಂದುವರಿಯುವಂತೆ ಮಾಡಿದೆ. ಈವರೆಗೆ ಗುಣಮುಖರಾದ ರೋಗಿಗಳ ಸಂಖ್ಯೆ 81.15 ಲಕ್ಷ ದಾಟಿದೆ. ಚೇತರಿಕೆ ಪ್ರಮಾಣ ಶೇ.92.97ರಷ್ಟು ಏರಿಕೆ ಮತ್ತು ಸಾವಿನ ಪ್ರಮಾಣ ಶೇ.1.47ರಷ್ಟು ತಗ್ಗಿದ್ದು, ಜನರಲ್ಲಿ ನಿರಾಳತೆ ಮೂಡಿದಿದೆ.
ದೇಶದಲ್ಲಿ ಮೃತರ ಸಂಖ್ಯೆ 1,28,668 ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ನಾಳೆ ವೇಳೆಗೆ 1.29 ಲಕ್ಷ ದಾಟುವ ಸಾಧ್ಯತೆ ಇದೆ.

ಭಾರತದಲ್ಲಿ ಒಟ್ಟು ರೋಗಿಗಳ ಸಂಖ್ಯೆ 87,28,795ರಷ್ಟಿದ್ದು, ನಾಳೆ ವೇಳೆಗೆ 88 ಲಕ್ಷ ದಾಟುವ ಸಂಭವ ಉಂಟು. ಆಗಸ್ಟ್ 7ರಂದು 20 ಲಕ್ಷ ಇದ್ದ ಪಾಸಿಟಿವ್ ಪ್ರಕರಣಗಳು ಆ.23ಕ್ಕೆ 30 ಲಕ್ಷಕ್ಕೇರಿತ್ತು. ನಂತರ ಸೆಪ್ಟೆಂಬರ್ 5ರಂದು 40 ಲಕ್ಷ ದಾಟಿತ್ತು. ಕೇವಲ 11 ದಿನಗಳಲ್ಲಿ ಅಂದರೆ ಸೆ.16ರಂದು 50 ಲಕ್ಷ ದಾಟಿದೆ. ಸೆ.28ರಂದು 60 ಲಕ್ಷ ಮೀರಿದೆ. ಅ.11ರಂದು 70 ಲಕ್ಷ ತಲುಪಿದೆ. ಅ.29ರಂದು 80 ಲಕ್ಷ ಮುಟ್ಟಿದೆ ಇನ್ನೆರಡು ದಿನಗಳಲ್ಲಿ 90 ಲಕ್ಷಕ್ಕೇರುವ ಆತಂಕವಿದೆ.

ಸಕ್ರಿಯ ಪ್ರಕರಣಗಳಲ್ಲಿ ನಿರಂತರ ಇಳಿಕೆ ಕಂಡುಬಂದಿದ್ದು, ಸತತ ಎರಡನೇ ದಿನ 5 ಲಕ್ಷಕ್ಕಿಂತ ಕಡಿಮೆ ಆಕ್ಟೀವ್ ಕೇಸ್‍ಗಳು ವರದಿಯಾಗಿವೆ. 24 ತಾಸುಗಳಲ್ಲಿ 4,84,547 ಪ್ರಕರಣಗಳು ದಾಖಲಾಗಿವೆ. ಇಂದು ಬೆಳಗ್ಗೆಯಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲಿವೆ. ಆದರೂ ಚೇತರಿಕೆ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಮಹಾರಾಷ್ಟ್ರ ರಾಜ್ಯವು ಸೋಂಕು ಮತ್ತು ಸಾವಿನ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ.

ರಾಜಧಾನಿ ನವದೆಹಲಿ ಮತ್ತು ಕೇರಳದಲ್ಲಿ ನಿಯಂತ್ರಣದಲ್ಲಿದ್ದ ಕೋವಿಡ್-19 ವೈರಸ್ ಸೋಂಕುಗಳು ಮತ್ತೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಸತತ 15 ದಿನಗಳಿಂದ ದಿನನಿತ್ಯ 5,000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಲೇ ಇವೆ. ನಿನ್ನೆ ದಾಖಲೆ ಪ್ರಮಾಣದಲ್ಲಿ 9,000ಕ್ಕೂ ಅಧಿಕ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿತ್ತು.

TRENDING