Thursday, January 21, 2021
Home ಜಿಲ್ಲೆ ರಾಯಚೂರು ಮಸ್ಕಿ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲವು ಖಚಿತ: ಎನ್. ರವಿಕುಮಾರ್

ಇದೀಗ ಬಂದ ಸುದ್ದಿ

ಮಸ್ಕಿ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲವು ಖಚಿತ: ಎನ್. ರವಿಕುಮಾರ್

 ರಾಯಚೂರು: ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಎರಡು ಉಪಚುನಾವಣೆಯಲ್ಲಿ ಗೆದಿದ್ದೇವೆ. ಮಸ್ಕಿ ಕ್ಷೇತ್ರ ಈ ಮೊದಲು ಬಿಜೆಪಿ ವಶದಲ್ಲಿತ್ತು. ಈ ಬಾರಿ ಕೂಡ ಗೆಲವು ನಮ್ಮದೆ. ಮಸ್ಕಿ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಪರಿಶೀಲನೆ ನಡೆಸುತ್ತೇನೆ ಎಂದರು.

ಮಸ್ಕಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿದ್ದು, ಮುಂದೆ ಹೆಚ್ಚಿನ ಅಭಿವೃದ್ಧಿಗೊಳಿಸಲಾಗುವುದು. ಈ ಭಾಗದ ನೀರಾವರಿ ಯೋಜನೆಯಾದ 5ಎ ಕಾಲುವೆ ಮಂಜೂರಿಗಾಗಿ ಉಪಚುನಾವಣೆ ಘೋಷಣೆ ಮಾಡುವ ಮೊದಲು ಮುಖ್ಯಮಂತ್ರಿಗೆ ಮನವಿ ಮಾಡಿ ಮಂಜೂರು ಮಾಡಿಸಲು ಪ್ರಯತ್ನ ಮಾಡಲಾಗುವುದು ಎಂದರು.

TRENDING