ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 29,164 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿಯ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 29,164 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 88,74,291 ಕ್ಕೆ ಏರಿಕೆಯಾಗಿದೆ.
ಇನ್ನು ಕೊರೊನಾ ಮಹಾಮಾರಿಗೆ ನಿನ್ನೆ ಒಂದೇ ದಿನ 449 ಮಂದಿ ಬಲಿಯಾಗಿದ್ದು, ಈ ಮೂಲಕ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 1,30,519 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಒಟ್ಟು ಸೋಂಕಿತರ ಪೈಕಿ 82,90,371 ಮಂದಿ ಗುಣಮುಖರಾಗಿದ್ದು, ಸದ್ಯ 4,53,401 ಸಕ್ರೀಯ ಪ್ರಕರಣಗಳಿವೆ.