Tuesday, November 24, 2020
Home ಅಂತರ್ ರಾಷ್ಟ್ರೀಯ ಅಮೆರಿಕಾದಲ್ಲಿ ಕೊರೋನಾ ಅಬ್ಬರ: 2.50 ಲಕ್ಷ ಗಡಿ ದಾಟಿದ ಮೃತಪಟ್ಟವರ ಸಂಖ್ಯೆ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಅಮೆರಿಕಾದಲ್ಲಿ ಕೊರೋನಾ ಅಬ್ಬರ: 2.50 ಲಕ್ಷ ಗಡಿ ದಾಟಿದ ಮೃತಪಟ್ಟವರ ಸಂಖ್ಯೆ

 ವಾಷಿಂಗ್ಟನ್: ಅಮೆರಿಕಾದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿ ಮೃತಪಟ್ಟವರ ಸಂಖ್ಯೆ 2.5 ಲಕ್ಷ ಗಡಿ ದಾಟಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಅಂಕಿ ಅಂಶಗಳ ಪ್ರಕಾರ ಬುಧವಾರದ ವರೆಗೆ ಅಮೆರಿಕಾದಲ್ಲಿ ಕೊರೊನಾ ಸೋಂಕಿನಿಂದ 2 ಲಕ್ಷ 50,029 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

ಅಮೆರಿಕಾದಲ್ಲಿ ಈವರೆಗೆ ಒಟ್ಟು 1 ಕೋಟಿ 15 ಲಕ್ಷದ 17,455 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೊರೊನಾ ಸಾಂಕ್ರಾಮಿಕ ಅಮೆರಿಕಾವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಪ್ರತಿದಿನ ಒಂದೂವರೆ ಲಕ್ಷಕ್ಕೂ ಹೆಚ್ಚು ಸೋಂಕು ಪ್ರಕರಣಗಳು, ಸಾವಿರಕ್ಕೂ ಹೆಚ್ಚು ಸಾವುಗಳು ದಾಖಲಾಗುತ್ತಿವೆ. ಚಳಿಗಾಲ ಸಮೀಪಿಸುತ್ತಿರುವಂತೆ ಸಾಂಕ್ರಾಮಿಕ ಮತ್ತಷ್ಟು ವ್ಯಾಪಿಸುತ್ತಿದೆ.

ಟ್ರಂಪ್ ಆಡಳಿತ ಮಾತ್ರ ಕೊರೊನಾ ನಿಯಂತ್ರಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೊರೊನಾ ಪ್ರಸರಣ ತೀವ್ರ ಗೊಳ್ಳುತ್ತಿರುವಂತೆ ನ್ಯೂಯಾರ್ಕ್ ನಗರದಲ್ಲಿ ಶಾಲೆಗಳನ್ನು ಮತ್ತೆ ಮುಚ್ಚಲಾಗಿದೆ. ಬಾರ್ ಹಾಗೂ ರೆಸ್ಟೋರೆಂಟ್‌ ಗಳ ಮೇಲೆ ಮತ್ತೆ ನಿರ್ಬಂಧ ವಿಧಿಸಲಾಗಿದೆ.

ಮತ್ತೊಂದೆಡೆ ಕೊರೊನಾ ವ್ಯಾಪಕವಾಗಿ ಮತ್ತೆ ಹರಡುತ್ತಿದ್ದರೂ ಹೆಚ್ಚಿನ ರಾಜ್ಯಗಳಲ್ಲಿ ಜನರು ಕನಿಷ್ಠ ಮಾಸ್ಕ್ ಸಹ ಧರಿಸುತ್ತಿಲ್ಲ. ನಿಯೋಜಿತ ಅಮೆರಿಕಾ ಅಧ್ಯಕ್ಷ ಜೋ ಬಿಡನ್, ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ವಿಶ್ವಾದ್ಯಂತ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಹಾಗೂ ಸಾವುಗಳು ಅಮೆರಿಕಾದಲ್ಲಿ ವರದಿಯಾಗಿದೆ. ಅಮೆರಿಕಾ ನಂತರ ಬ್ರೆಜಿಲ್ (1,66,699), ಭಾರತ (1,30,993) ಮತ್ತು ಮೆಕ್ಸಿಕೊ (99,026) ಅತಿ ಹೆಚ್ಚು ಸಾವುಗಳು ಸಂಭವಿಸಿವೆ.

TRENDING