Saturday, January 16, 2021
Home ಜಿಲ್ಲೆ ಬಾಗಲಕೋಟೆಯಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಇದೀಗ ಬಂದ ಸುದ್ದಿ

ಬಾಗಲಕೋಟೆಯಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಬಾಗಲಕೋಟೆ: ಪದವಿ ಕಾಲೇಜುಗಳು ಆರಂಭಗೊಂಡ ಬೆನ್ನಲ್ಲೇ ಜಿಲ್ಲೆಯಲ್ಲಿನ ಒಟ್ಟು 10 ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದು, ಇನ್ನಿತರ ವಿದ್ಯಾರ್ಥಿಗಳು ಹಾಗೂ ಪಾಲಕರಿಗೂ ಆತಂಕವನ್ನುಂಟುಮಾಡಿದೆ.

ಎಂಟು ತಿಂಗಳ ಬಳಿಕ ಪದವಿ ಕಾಲೇಜು ಪ್ರಾರಂಭಗೊಂಡಿದ್ದು, ಮೂರು ದಿನದಲ್ಲಿ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ 1,500 ಜನರ ಆರ್​​​ಟಿಪಿಸಿಆರ್ ಟೆಸ್ಟ್ ಮಾಡಲಾಗಿದೆ. ಆರ್ ಟಿಪಿಸಿಆರ್ ಟೆಸ್ಟ್ ವರದಿ ಇದ್ದರೆ ಮಾತ್ರ ಕಾಲೇಜಿಗೆ ಪ್ರವೇಶ ನೀಡಲಾಗುವುದು ಎಂಬ ಕಾರಣಕ್ಕೆ ಎಲ್ಲ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಒಳಗಾಗಿದ್ದು, ಈ ಪೈಕಿ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಇರುವುದು ದೃಢಪಟ್ಟಿದೆ.

ದಿ ನ್ಯೂಸ್ 24 ಕನ್ನಡ

TRENDING