ಬೆಂಗಳೂರು : ರಾಜ್ಯ ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಬೆಂಬಲ ನೀಡಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ತೀರ್ಮಾನಿಸಿವೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇತ್ತೀಚೆಗಷ್ಟೇ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮರಾಠ ಪ್ರಾಧಿಕಾರ ರಚನೆಗೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5 ರರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ.
ದಿ ನ್ಯೂಸ್ 24 ಕನ್ನಡ