Sunday, June 13, 2021
Homeಜಿಲ್ಲೆಕಲಬುರ್ಗಿಮುಂದಿನ ವಾರವೇ ಸಂಪುಟ ವಿಸ್ತರಣೆ ಎಂದ ಸಚಿವ ಲಕ್ಷ್ಮಣ ಸವದಿ

ಇದೀಗ ಬಂದ ಸುದ್ದಿ

ಮುಂದಿನ ವಾರವೇ ಸಂಪುಟ ವಿಸ್ತರಣೆ ಎಂದ ಸಚಿವ ಲಕ್ಷ್ಮಣ ಸವದಿ

ಕಲಬುರ್ಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ವಿಳಂಬವಾಗುತ್ತಿದ್ದು, ಮುಂದಿನ ವಾರ ಸಂಪುಟ ವಿಸ್ತರಣೆಯಾಗಬಹುದು ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಇಲ್ಲಿನ ಎಲ್ಲಾ ವಿಚಾರಗಳನ್ನು ಮನವರಿಕೆ ಮಾಡಿದ್ದಾರೆ. ನಡ್ಡಾ ಅವರು ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸಲಿದ್ದಾರೆ. ಹೀಗಾಗಿ ಸಮಯಾವಕಾಶ ಬೇಕಿರುವುದರಿಂದ ಮುಂದಿನ ವಾರ ಸಂಪುಟ ವಿಸ್ತರಣೆಯಾಗಬಹುದು ಎಂದು ತಿಳಿಸಿದರು.

 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img