Friday, November 27, 2020
Home ಅಂತರ್ ರಾಷ್ಟ್ರೀಯ ರುಪೇ ಕಾರ್ಡ್ ಹಂತ-2 ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ಲೋತಾಯ್ ತ್ಸೆರಿಂಗ್

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ರುಪೇ ಕಾರ್ಡ್ ಹಂತ-2 ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ಲೋತಾಯ್ ತ್ಸೆರಿಂಗ್

 ನವದೆಹಲಿ: ಭೂತಾನ್ ಕಾರ್ಡ್’ಗಳನ್ನು ಹೊಂದಿರುವವರು ಭಾರತದಲ್ಲಿ ರುಪೇ ನೆಟ್‌ವರ್ಕ್ ಪ್ರವೇಶಿಸಲು ಅನುವು ಮಾಡಿಕೊಡುವ ರುಪೇ ಕಾರ್ಡ್ ಹಂತ-2ನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭೂತಾನ್ ಪ್ರಧಾನಿ ಲೋತಾಯ್ ತ್ಸೆರಿಂಗ್ ಅವರು ಶುಕ್ರವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಜಂಟಿಯಾಗಿ ಉದ್ಘಾಟನೆ ಮಾಡಿದ್ದಾರೆ.

ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಭೂತಾನ್’ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿಯವರು ರುಪೇ ಕಾರ್ಡ್ ಹಂತ-1ನ್ನು ಉದ್ಘಾಟನೆ ಮಾಡಿದ್ದರು.

ರುಪೇ ಕಾರ್ಡ್ ಹಂತ-2ನ್ನು ಪ್ರಧಾನಿ ಮೋದಿ ಹಾಗೂ ಭೂತಾನ್ ಪ್ರಧಾನಮಂತ್ರಿಗಳು ಜಂಟಿಯಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಭುತಾನ್‌ನಲ್ಲಿ ರುಪೇ ಕಾರ್ಡ್ ಹಂತ-2ನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಭಾರತ-ಭೂತಾನ್ ನಡುವಿನ ಸಾವಿರಾರು ವರ್ಷಗಳ ರಾಜತಾಂತ್ರಿಕ ಹಾಗೂ ಸಾಂಸ್ಕೃತಿಕ ಸಂಬಂಧ ಎರಡೂ ರಾಷ್ಟ್ರಗಳನ್ನು ಸದಾಕಾಲ ಒಟ್ಟಿಗೆ ಮುನ್ನಡೆಯುವಂತೆ ಪ್ರೇರೇಪಿಸುತ್ತವೆ. ಭಾರತ, ಭೂತಾನ್ ಸಂಬಂಧ ಅತ್ಯಂತ ಗಟ್ಟಿಯಾದುದು. ಮುಂದಿನ ವರ್ಷ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಸಹಾಯದೊಂದಿಗೆ ಭೂತಾನ್ ತನ್ನ ಮೊದಲ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ. ಇದಕ್ಕಾಗಿ ಭೂತಾನ್ ರಾಷ್ಟ್ರದ ನಾಲ್ವರು ಬಾಹ್ಯಾಕಾಶ ಎಂಜಿನಿಯರ್’ಗಳು ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆಂದು ಹೇಳಿದ್ದಾರೆ.

ಭೂತಾನ್’ನ ಬಾಹ್ಯಾಕಾಶ ಯೋಜನೆ ಕ್ಷಿಪ್ರಗತಿಯಲ್ಲಿ ಮುಂದುವರೆಯುತ್ತಿರುವುದು ಸಂತಸ ತಂದಿದೆ. COVID-19 ಸಾಂಕ್ರಾಮಿಕ ರೋಗದ ಈ ಕಷ್ಟದ ಸಮಯದಲ್ಲಿ ಭಾರತವು ಭೂತಾನ್‌ನೊಂದಿಗೆ ನಿಲ್ಲಲಿದೆ. ನೆರೆಯ ರಾಷ್ಟ್ರದ ಅವಶ್ಯಕತೆಗಳನ್ನು ಪೂರೈಸುವುದು, ಭಾರತದ ಮೊದಲ ಆದ್ಯತೆಯಾಗಿರುತ್ತದೆ.

ಭೂತಾನ್‌ನಲ್ಲಿ ರುಪೇ ಕಾರ್ಡ್‌ಗಳ ಹಂತ -1 ರ ಬಿಡುಗಡೆಯು ಭಾರತದ ಪ್ರವಾಸಿಗರಿಗೆ ಭೂತಾನ್‌ನಾದ್ಯಂತ ಎಟಿಎಂ ಮತ್ತು ಪಾಯಿಂಟ್ ಆಫ್ ಸೇಲ್ (ಪಿಒಎಸ್) ಟರ್ಮಿನಲ್‌ಗಳನ್ನು ಪ್ರವೇಶಿಸಲು ಅನುವು ಮಾಡಿಕೊಟ್ಟಿದೆ.

ಎರಡನೇ ಹಂತವು ಇದೀಗ ಭೂತಾನ್ ಕಾರ್ಡ್ ಹೊಂದಿರುವವರಿಗೆ ಭಾರತದಲ್ಲಿ ರುಪೇ ನೆಟ್‌ವರ್ಕ್ ಪ್ರವೇಶಿಸಲು ಅವಕಾಶ ನೀಡುತ್ತದೆ ಎಂದು ತಿಳಿಸಿದ್ದಾರೆ.

ರುಪೇ ಕಾರ್ಡ್ ಭಾರತೀಯ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಪಾವತಿ ಜಾಲವಾಗಿದ್ದು, ಎಟಿಎಂಗಳು, ಪಿಒಎಸ್ ಸಾಧನಗಳು ಮತ್ತು ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಬಳಕೆ ಮಾಡಲು ಅವಕಾಶ ನೀಡಲಾಗಿದೆ.

TRENDING