ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ತೆರೆಮೇಲೆ ನೋಡಿ ಖುಷಿ ಪಡುವ ಅಭಿಮಾನಿಗಳಿಗೆ ನೇರವಾಗಿ ನೋಡುವ ಅವಕಾಶ ಸಿಕ್ಕರೆ ಎಷ್ಟು ಸಂತಸ ಆಗಬೇಡ. ಇಂತಹದೊಂದು ಅಪರೂಪದ ಘಟನೆ ಮಡಿಕೇರಿಯಲ್ಲಿ ವರದಿಯಾಗಿದೆ.
ಕಳೆದ ಎರಡು ದಿನಗಳ ಹಿಂದೆ ಸ್ನೇಹಿತರ ಜೊತೆ ಮಡಿಕೇರಿಗೆ ಬೈಕ್ ರೈಡ್ ಹೋಗಿರುವ ನಟ ದರ್ಶನ್ ಅಲ್ಲೇ ವಾಸ್ತವ್ಯ ಹೂಡಿದ್ದರು. ಸ್ನೇಹಿತನಿಗೆ ಸೇರಿದ ತೋಟದ ಮನೆಯಲ್ಲಿ ಟೈಂ ಪಾಸ್ ಮಾಡುತ್ತಾ, ಗೆಳೆಯರ ಜೊತೆ ಕ್ರಿಕೆಟ್ ಆಡುತ್ತಿರುವ ವಿಡಿಯೋ ಸಹ ವೈರಲ್ ಆಗಿತ್ತು.
ಇದೀಗ, ಮಡಿಕೇರಿಯಲ್ಲಿ ದಾರಿ ಮಧ್ಯೆ ಸಿಕ್ಕ ಅಭಿಮಾನಿಯೊಬ್ಬರ ಮನೆಗೆ ದರ್ಶನ್ ಭೇಟಿ ನೀಡಿ ಗಮನ ಸೆಳೆದಿದ್ದಾರೆ.
ಬೆಂಗಳೂರಿನಿಂದ ಮಡಿಕೇರಿ ಕಡೆ ಹೋಗುವ ವೇಳೆ ಸೋಮವಾರಪೇಟೆಯ ತಾಲ್ಲೂಕಿನ ಬೈಚನಹಳ್ಳಿ ಬಳಿ ಹೆದ್ದಾರಿಯಲ್ಲಿ ನಟ ದರ್ಶನ್ ವಿಶ್ರಾಂತಿಗೆಂದು ಬ್ರೇಕ್ ಹಾಕಿದ್ದಾರೆ.