Tuesday, November 24, 2020
Home ಬೆಂಗಳೂರು ಅಖಂಡ ಶ್ರೀನಿವಾಸ ಮೂರ್ತಿ ಮನವಿಯನ್ನು ಶಿಸ್ತು ಸಮಿತಿಗೆ ನೀಡುತ್ತೇನೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಅಖಂಡ ಶ್ರೀನಿವಾಸ ಮೂರ್ತಿ ಮನವಿಯನ್ನು ಶಿಸ್ತು ಸಮಿತಿಗೆ ನೀಡುತ್ತೇನೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿ

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನವಿಯನ್ನು ಆಲಿಸಿದ್ದು, ಅದನ್ನು ಪಕ್ಷದ ಶಿಸ್ತು ಸಮಿತಿಗೆ ನೀಡುತ್ತೇನೆ. ಶಿಸ್ತು ಸಮಿತಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರದಲ್ಲಿನ ತಮ್ಮ ನಿವಾಸಕ್ಕೆ ಶನಿವಾರ ಭೇಟಿ ನೀಡಿದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಜತೆ ಮಾತುಕತೆ ನಡೆಸಿದ ನಂತರ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಇಂದು ನನ್ನನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ನಾನು ಅವರ ಮನವಿ ಆಲಿಸಿದ್ದೇನೆ. ಗಲಭೆ ಪ್ರಕರಣದಲ್ಲಿ ಅವರಿಗೆ ಅನ್ಯಾಯವಾಗಿರುವುದು ಗೊತ್ತಿದೆ. ಈ ವಿಚಾರವಾಗಿ ನನಗೂ ತುಂಬಾ ನೋವಾಗಿದೆ ಎಂದು ಹೇಳಿದರು.

ನಮ್ಮ ಶಾಸಕರು, ಸಂಪತ್ ರಾಜ್ ಅವರ ಮೇಲೂ ಅನುಮಾನ ವ್ಯಕ್ತಪಡಿಸಿದ್ದಾರೆ. ಜತೆಗೆ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಪತ್ರ ನೀಡಿದ್ದಾರೆ. ಈ ಪತ್ರವನ್ನು ಪಕ್ಷದ ಶಿಸ್ತು ಸಮಿತಿಗೆ ತಲುಪಿಸುತ್ತೇನೆ ಎಂದರು.

ಶಿಸ್ತು ಸಮಿತಿಯಿಂದ ಸೂಕ್ತ ಕ್ರಮ: ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿರುವ ಸಂಪತ್ ರಾಜ್ ಅವರ ವಿರುದ್ಧ ಪಕ್ಷದ ಅಧ್ಯಕ್ಷರಾಗಿ ನೀವು ಯಾವ ತೀರ್ಮಾನ ಕೈಗೊಳ್ಳುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಾವುದೇ ಒಬ್ಬ ವ್ಯಕ್ತಿ ಆರೋಪಿಯಾದ ಮಾತ್ರಕ್ಕೆ ಆತನ ಮೇಲೆ ನಾನು ಏಕಾಏಕಿ ಕ್ರಮ ಜರುಗಿಸಲು ಆಗುವುದಿಲ್ಲ. ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಸಂಪತ್ ರಾಜ್ ಅವರ ಮೇಲಿನ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳನ್ನು ಒದಗಿಸಬೇಕಿದೆ. ಇದೆಲ್ಲವೂ ನ್ಯಾಯಾಲಯದಲ್ಲಿ ತೀರ್ಮಾನ ಆಗಬೇಕಿದೆ. ನಾಳೆ ಯಾರಾದರೂ ಏನಾದರೂ ಹೇಳಿಕೆ ಕೊಟ್ಟರೆ ಅದರ ಆಧಾರದ ಮೇಲೆ ನಾನು ಕ್ರಮ ಕೈಗೊಳ್ಳಲು ಸಾಧ್ಯವೇ ಎಂದರು.

ಪೊಲೀಸ್ ಅಧಿಕಾರಿಗಳು, ಬಿಜೆಪಿ ನಾಯಕರು ಹಾಗೂ ಸರ್ಕಾರದ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಯಾರು ಯಾಕಾಗಿ ಯಾವ ಹೇಳಿಕೆ ನೀಡಿದ್ದಾರೆ ಎಂಬುದು ನಮಗೂ ಗೊತ್ತಿದೆ. ನಮ್ಮ ಪಕ್ಷದಲ್ಲಿ ಶಿಸ್ತು ಸಮಿತಿ ಇದೆ. ಈ ವಿಚಾರವನ್ನು ಶಿಸ್ತು ಸಮಿತಿ ಕೂಲಂಕಷವಾಗಿ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

TRENDING