Saturday, July 31, 2021
Homeರಾಜ್ಯಡಿಸೆಂಬರ್ 5 ಕ್ಕೆ `ಕರ್ನಾಟಕ ಬಂದ್' : ಏನಿರುತ್ತೆ? ಏನಿರಲ್ಲ?

ಇದೀಗ ಬಂದ ಸುದ್ದಿ

ಡಿಸೆಂಬರ್ 5 ಕ್ಕೆ `ಕರ್ನಾಟಕ ಬಂದ್’ : ಏನಿರುತ್ತೆ? ಏನಿರಲ್ಲ?

 

ಬೆಂಗಳೂರು: ರಾಜ್ಯ ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್5 ರಂದು ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಬೆಂಬಲ ನೀಡಿದ್ದು, ಡಿಸೆಂಬರ್ 5 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ತೀರ್ಮಾನಿಸಿವೆ.

ಮುಖ್ಯಮಂತ್ರಿ ಬಿ . ಎಸ್ . ಯಡಿಯೂರಪ್ಪ ಇತ್ತೀಚೆಗಷ್ಟೇ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮರಾಠ ಪ್ರಾಧಿಕಾರ ರಚನೆಗೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5 ರರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ .

ಹಾಗಾದರೆ ಡಿಸೆಂಬರ್ 5 ರ ಕರ್ನಾಟಕ ಬಂದ್ ದಿನ ಏನಿರುತ್ತೆ? ಏನಿರಲ್ಲ?

ಏನಿರುತ್ತೆ?

ಬೆಂಗಳೂರಿನಲ್ಲಿ ಬಿಎಂಟಿಸಿ ಹಾಗೂ ಮೆಟ್ರೋ ಸೇವೆಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಅದರಂತೆ ರಾಜ್ಯಾದ್ಯಂತ ಸಾರಿಗೆ ಬಸ್ ಸಂಚಾರ ಕೂಡ ಇರಲಿದೆ.

ಆಸ್ಪತ್ರೆ, ಔಷಧ ಅಂಗಡಿಗಳು ಸೇರಿದಂತೆ ಅಗತ್ಯ ಸೇವೆಗಳು ಇರಲಿವೆ.

ಏನಿರಲ್ಲ?

ಕರ್ನಾಟಕ ಬಂದ್ ವೇಳೆ ಖಾಸಗಿ ವಾಹನ ಸಂಚಾರ , ಆಟೋ , ಟ್ಯಾಕ್ಸಿ ಸಂಚಾರ ಇರುವುದಿಲ್ಲ ಎಂದು ಹೇಳಲಾಗಿದೆ .

ಅದರಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಆಟೋ ಮತ್ತು ಕ್ಯಾಬ್ ವ್ಯವಸ್ಥೆ ಇರುವುದಿಲ್ಲ ಎನ್ನಲಾಗಿದೆ.

ಬಾರ್ ಗಳೂ ಸಹ ಬಂದ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img