Wednesday, December 2, 2020
Home ಸುದ್ದಿ ಜಾಲ ಹುಬ್ಬಳ್ಳಿಯಲ್ಲಿ ನಟಿ ಉಮಾಶ್ರೀ ಕಾರು ಅಪಘಾತ :ಇಬ್ಬರು ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಹುಬ್ಬಳ್ಳಿಯಲ್ಲಿ ನಟಿ ಉಮಾಶ್ರೀ ಕಾರು ಅಪಘಾತ :ಇಬ್ಬರು ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ

ಹುಬ್ಬಳ್ಳಿ, ನ.21: ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಈ ಬಗ್ಗೆ ಸುದ್ದಿವಾಹಿನಿಗಳು ವರದಿ ಮಾಡಿದ್ದು, ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಇನ್ನೊಂದು ಕಾರಿನ ನಡುವೆ ಶುಕ್ರವಾರ ರಾತ್ರಿ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸ್ ಮೂಲಗಳು ತಿಳಿಸಿರುವಂತೆ ಅಪಘಾತಕ್ಕೀಡಾಗ ಕಾರು ಚಿತ್ರನಟಿ ಹಾಗೂ ರಾಜಕಾರಣಿ ಉಮಾಶ್ರೀ ಅವರಿಗೆ ಸೇರಿದ್ದು ಎನ್ನಲಾಗಿದೆ.

ಮೃತರು ಮತ್ತು ಗಾಯಾಳುಗಳೆಲ್ಲರೂ ಬಲೆನೋ ಕಾರಿನಲ್ಲಿದ್ದವರು. ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊರಟಿದ್ದ ಬಲೆನೋ ಕಾರು, ಗದಗದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ ಹೊಡೆದಿವೆ.

ಈ ಕುರಿತು ಇನ್ನಷ್ಟು ಮಾಹಿತಿ ಕಲೆಹಾಕುತ್ತಿದ್ದೇವೆ ಎಂದು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಿದ್ದ. ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಸಮೀಪ ಅಪಘಾತ ನಡೆದಿದ್ದು, ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿಗೆ ಬಂದ ಕಾರುಗಳ ನಡುವೆ ಡಿಕ್ಕಿಯಾಗಿದೆ.

TRENDING