Saturday, July 31, 2021
Homeದೆಹಲಿಸತತ ಮೂರನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಇದೀಗ ಬಂದ ಸುದ್ದಿ

ಸತತ ಮೂರನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 8 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 19 ಪೈಸೆಯಷ್ಟು ಏರಿಕೆಯಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಸುಮಾರು ಎರಡು ತಿಂಗಳ ನಂತರ ಹೆಚ್ಚಳವಾಗಿದೆ.

ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 81 ರೂಪಾಯಿ 46 ಪೈಸೆಯಷ್ಟಾಗಿದ್ದು, ಡೀಸೆಲ್ ಬೆಲೆ 71 ರೂಪಾಯಿ07 ಪೈಸೆಯಷ್ಟಾಗಿದೆ.

ಕಳೆದ ಶುಕ್ರವಾರದಿಂದ ಸತತ ಮೂರನೇ ದಿನ ಇಂಧನ ಬೆಲೆ ಹೆಚ್ಚಳವಾಗುತ್ತಿದೆ. ಮೂರು ದಿನಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 40 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 61 ಪೈಸೆ ಏರಿಕೆಯಾಗಿದೆ.

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಲೀಟರ್ ಗೆ 84 ರೂಪಾಯಿ 18 ಪೈಸೆಯಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 75 ರೂಪಾಯಿ 14 ಪೈಸೆಯಷ್ಟಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img