Sunday, June 13, 2021
Homeಬೆಂಗಳೂರುಪೊಲೀಸ್ ನೇಮಕಾತಿ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ಪೊಲೀಸರು ಸೇರಿ 9 ನಕಲಿ ಅಭ್ಯರ್ಥಿಗಳ ಬಂಧನ

ಇದೀಗ ಬಂದ ಸುದ್ದಿ

ಪೊಲೀಸ್ ನೇಮಕಾತಿ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ಪೊಲೀಸರು ಸೇರಿ 9 ನಕಲಿ ಅಭ್ಯರ್ಥಿಗಳ ಬಂಧನ

 ಬೆಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ಪೊಲೀಸರು ಸೇರಿದಂತೆ 9 ನಕಲಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ.

ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗಪ್ಪ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರ ಜಿಎಸ್‌ಎಸ್ ಕಾಲೇಜಿನಲ್ಲಿ ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದಿದ್ದಾರೆ. ಈತ ಬೇರೆ ಅಭ್ಯರ್ಥಿಯ ಪರವಾಗಿ ಪರೀಕ್ಷೆ ಬರೆಯುವಾಗ ಪರಿಶೀಲನೆ ನಡೆಸಿ ಬಂಧಿಸಲಾಗಿದೆ.

ಅದೇ ರೀತಿ ರಾಜಾಜಿನಗರದ ಮಹಿಳಾ ಕಾಲೇಜಿನಲ್ಲಿ ಮಲ್ಲಿಕಾರ್ಜುನ ಎಂಬವರನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಕೆಎಲ್‌ಇ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ಅಂಕಲಗಿ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ ಸ್ಟೇಬಲ್ ಅಡಿವೆಪ್ಪ ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಮೂವರು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ 9 ಮಂದಿ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದಿದ್ದು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img