Wednesday, January 27, 2021
Home ಜಿಲ್ಲೆ ಶಿವಮೊಗ್ಗ ಆಗುಂಬೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸೈನಿಕ ಶಾಲೆ ಆರಂಭ

ಇದೀಗ ಬಂದ ಸುದ್ದಿ

ಆಗುಂಬೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸೈನಿಕ ಶಾಲೆ ಆರಂಭ

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸೈನಿಕ ಶಾಲೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತಂತೆ ಈಗಾಗಲೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗಿದ್ದು, ಸೈನಿಕ ಶಾಲೆಗಾಗಿ 100 ಎಕರೆ ಪ್ರದೇಶ ಗುರುತಿಸುವ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಆಗುಂಬೆಯಲ್ಲಿ ಸ್ಥಾಪನೆಯಾಗುತ್ತಿರುವ ಸೈನಿಕ ಶಾಲೆ ಅಂತರಾಷ್ಟ್ರೀಯ ಮಟ್ಟ ಹೊಂದಿರಲಿದ್ದು, ಇದಕ್ಕಾಗಿ 300 ಕೋಟಿ ರೂಪಾಯಿಗಳಿಗೂ ಅಧಿಕ ಹಣವನ್ನು ವೆಚ್ಚ ಮಾಡಲಾಗುತ್ತದೆ ಎಂದು ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

TRENDING