Wednesday, January 27, 2021
Home ಜಿಲ್ಲೆ ಮೈಸೂರು ನಿವಾರ್ ಚಂಡಮಾರುತ ಎದುರಿಸಲು ಸಜ್ಜು:ಬಿ.ಎಸ್ ಯಡಿಯೂರಪ್ಪ

ಇದೀಗ ಬಂದ ಸುದ್ದಿ

ನಿವಾರ್ ಚಂಡಮಾರುತ ಎದುರಿಸಲು ಸಜ್ಜು:ಬಿ.ಎಸ್ ಯಡಿಯೂರಪ್ಪ

ಮೈಸೂರು, ನ. 25: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಎರಡು ದಿನಗಳಿಂದ ಮೈಸೂರು ಪ್ರವಾಸದಲ್ಲಿದ್ದಾರೆ. ಇಂದು ಅಪ್ಪಳಿಸಲಿರುವ ನಿವಾರ್ ಚಂಡಮಾರುತ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ತಮಿಳುನಾಡು ಕರಾವಳಿ ತೀರದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸಲಿದೆ ಎಂಬ ಮಾಹಿತಿ ಇದೆ ಎಂದರು.

ಚಂಡಮಾರುತದಿಂದ ರಾಜ್ಯದಲ್ಲಿಯೂ ಭಾರೀ ಮಳೆಯಾಗುವ ಸಂಭವವಿದ್ದು, ಸಂಬಂಧಪಟ್ಟ ಜಿಲ್ಲೆಯ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮ ಕೈಗೊಂಡು ಅಲರ್ಟ್ ಆಗಿರಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ, ಇಂದು ಇನ್ನೂ 25 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡುತ್ತೇವೆ. ಇಂದು ಸಂಜೆಯ ವೇಳೆಗೆ ಆದೇಶ ಹೊರಡಿಸಲಾಗುತ್ತದೆ. ಯಾರ್ಯಾರಿಗೆ ಅವಕಾಶ ತಪ್ಪಿದೆಯೋ ಅವರಿಗೆ ಮುಂದೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ ಸಂಪುಟ ವಿಸ್ತರಣೆ ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ ಎಂದರು.

TRENDING