Sunday, January 17, 2021
Home ಅಂತರ್ ರಾಜ್ಯ ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ ಯೋಗಿ ಆದಿತ್ಯನಾಥ್

ಇದೀಗ ಬಂದ ಸುದ್ದಿ

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ ಯೋಗಿ ಆದಿತ್ಯನಾಥ್

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಉತ್ತರ ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡಲು ಬಂದಿರುವ ಪ್ರಸ್ತಾವನೆಗೆ ಸಚಿವ ಸಂಪುಟ ಒಕ್ಕೊರಲಿನಿಂದ ಸಮ್ಮತಿ ನೀಡಿದೆ.

ಆಯೋಧ್ಯ ಜಿಲ್ಲೆಯಲ್ಲಿನ ವಿಮಾನ ನಿಲ್ದಾಣವನ್ನು ಇನ್ಮುಂದೆ ಮರ್ಯಾದಾ ಪುರುಷೋತ್ತಮ ಶ್ರೀರಾಮ್ ವಿಮಾನ ನಿಲ್ದಾಣ ಎಂದು ಕರೆಯಲಾಗುತ್ತದೆ.

ಸಚಿವ ಸಂಪುಟದ ನಿರ್ಣಯ ಹಾಗೂ ಸಂಬಂಧಪಟ್ಟ ಕಾನೂನು ತಿದ್ದುಪಡಿ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳಿಸಲಾಗಿದ್ದು, ಕೇಂದ್ರದ ಒಪ್ಪಿಗೆ ಬಂದ ಬಳಿಕ ವಿಮಾನ ನಿಲ್ದಾಣದಲ್ಲಿ ಹೊಸ ಹೆಸರಿನ ನಾಮಫಲಕ ಎದ್ದು ಕಾಣಲಿದೆ ಎಂದು ಉತ್ತರಪ್ರದೇಶ ಸರ್ಕಾರ ತಿಳಿಸಿದೆ.

ಆಗಸ್ಟ್ 5ರಂದು ಆಯೋಧ್ಯದಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ಕಾರ್ಯ ನೆರವೇರಿದ ಬಳಿಕ ನಗರದ ಮೂಲ ಸೌಕರ್ಯ ಹಾಗೂ ಅಭಿವೃದ್ಧಿ ಕಾರ್ಯಕ್ಕೆ ಯೋಗಿ ಆದಿತ್ಯನಾಥ್ ಸರ್ಕಾರ ಮುಂದಾಗಿದೆ.

TRENDING