ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದ ನಿವಾರ್ ಚಂಡಮಾರುತ ಉಂಟಾಗಿರುವುದರಿಂದ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನ ಭಾರೀಈ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನವೆಂಬರ್ 27 ರಿಂದ ಎರಡುಉ ದಿನ ಗುಡುಗು ಮಿಂಚುಉ ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.