Friday, January 15, 2021
Home ಜಿಲ್ಲೆ ಮೈಸೂರು ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ಇದೀಗ ಬಂದ ಸುದ್ದಿ

ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ಮೈಸೂರು: ಬೈಕ್ ಗೆ ಹಿಂದಿನಿಂದ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಮೈಸೂರಿನ ಸರ್ಕಾರಿ ಅತಿಥಿಗೃಹ ಮುಂಭಾಗದ ಸಿಗ್ನಲ್ ಜಂಕ್ಷನ್‌ನಲ್ಲಿ ನಡೆದಿದೆ.

ಮೈಸೂರಿನ ಹಳೆ ಕೆಸರೆ ನಿವಾಸಿ ಆನಂದ್(೨೮) ಸಾವನ್ನಪ್ಪಿದವರು. ಆನಂದ್ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಬೈಕ್‌ನಲ್ಲಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಬಸ್ ನಿಲ್ದಾಣ ಕಡೆಯಿಂದ ಹೋಗುತ್ತಿದ್ದರು.ಈ ವೇಳೆ ಹಿಂದಿನಿಂದ ಬಂದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿಯಾಗಿದ್ದು, ಕೆಳಗೆ ಬಿದ್ದ ಅವರ ತಲೆ ಮೇಲೆ ಬಸ್‌ನ ಹಿಂಬದಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ದೇವರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING