Wednesday, January 27, 2021
Home ರಾಜ್ಯ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರವು 1,200 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಕುರಿತು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಆಶ್ವಾಸನೆ ನೀಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದಂತಹ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ದೀರ್ಘವಾಗಿ ಚರ್ಚೆ ನಡೆಸಿದ್ದು, ಈ ವೇಳೆ ರಾಜ್ಯಕ್ಕೆ 1,200 ಕೋಟಿ ಹಚ್ಚುವರಿ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಇನ್ನು ರಾಜ್ಯದ 123 ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ 50 ಹೆಚ್ಚುವರಿ ಮಾನವ ದಿನಗಳ ಉದ್ಯೋಗ ಅವಕಾಶ ಕಲ್ಪಿಸಲು 400 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮವರ್ ಒಪ್ಪಿದ್ದಾರೆ ಎನ್ನಲಾಗಿದೆ.

TRENDING