Friday, January 15, 2021
Home ಸುದ್ದಿ ಜಾಲ ಸಚಿವರುಗಳ ಭಿನ್ನಾಭಿಪ್ರಾಯ, ಅಸಮಾಧಾನವನ್ನು ಬಗೆ ಹರಿಸುವ ಸಾಮರ್ಥ್ಯ ಯಡಿಯೂರಪ್ಪ ಅವರಿಗಿದೆ: ಕೆ. ಗೋಪಾಲಯ್ಯ

ಇದೀಗ ಬಂದ ಸುದ್ದಿ

ಸಚಿವರುಗಳ ಭಿನ್ನಾಭಿಪ್ರಾಯ, ಅಸಮಾಧಾನವನ್ನು ಬಗೆ ಹರಿಸುವ ಸಾಮರ್ಥ್ಯ ಯಡಿಯೂರಪ್ಪ ಅವರಿಗಿದೆ: ಕೆ. ಗೋಪಾಲಯ್ಯ

ಹಾಸನ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ, ಸಿಎಂ ಯಡಿಯೂರಪ್ಪ ತಮ್ಮ ಅಧಿಕಾರವಧಿಯನ್ನೂ ಪೂರ್ಣಗೊಳಿಸುತ್ತಾರೆ ಎಂದು ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು ಸಚಿವರುಗಳ ಮಧ್ಯೆ ಇರುವ ಭಿನ್ನಾಬಿಪ್ರಾಯ ಮತ್ತು ಅಸಮಾಧಾನವನ್ನು ಬಗೆಹರಿಸುವ ಸಾಮರ್ಥ್ಯ ಯಡಿಯೂರಪ್ಪ ಅವರಿಗಿದೆ, ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ಆದೇಶದಂತೆ ನಡೆಯಲಿದೆ, ಹೊಸಬರು, ಹಳಬರು ಎಂಬ ಬೇಧಭಾವವಿಲ್ಲ, ಎಲ್ಲರಿಗೂ ಒಂದೇ ರೀತಿಯ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಇನ್ನೂ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇಲಾಖೆಯ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲು ತೆರಳಿದ್ದಾರೆ ಎಂದು ಗೋಪಾಲಯ್ಯ ತಿಳಿಸಿದ್ದಾರೆ.

TRENDING