Sunday, January 17, 2021
Home ಅಂತರ್ ರಾಜ್ಯ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು ಸಾವು

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು ಸಾವು

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ.

ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಕಿಟಕಿ ಮೂಲಕ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೋಂಕಿತರನ್ನು ರಕ್ಷಣೆ ಮಾಡಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಬೆಂಕಿ ಏಕಾಏಕಿ ವ್ಯಾಪಿಸಿದ್ದು, ದಟ್ಟ ಹೊಗೆ, ಬೆಂಕಿಯ ಕೆನ್ನಾಲಗೆಯಿಂದ ಸೋಂಕಿತರು ಹೊರ ಬರಲು ಸಾಧ್ಯವಾಗಿಲ್ಲ. ಇದರಿಂದಾಗಿ 5 ಮಂದಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

TRENDING