Wednesday, January 27, 2021
Home ಅಂತರ್ ರಾಜ್ಯ ರಾಜಸ್ಥಾನ :8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ

ಇದೀಗ ಬಂದ ಸುದ್ದಿ

ರಾಜಸ್ಥಾನ :8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ

ಜೈಪುರ್,ನ.30-ಅಪರಿಚಿತ ವ್ಯಕ್ತಿಯೊಬ್ಬ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿ, ನಂತರ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದು ಪರಾರಿಯಾಗಿರುವ ಘಟನೆ ರಾಜಸ್ಥಾನದ ಪ್ರತಾಪ್‍ಗಡ್ ಜಿಲ್ಲೆಯಲ್ಲಿ ನಡೆದಿದೆ. ತಾಯಿ ಜತೆ ನಿದ್ರಿಸುತ್ತಿದ್ದ ಬಾಲಕಿಯನ್ನು ಅಪಹರಿಸಿದ ಕಾಮುಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿ, ಕೊಲೆ ಮಾಡಿ ಶವವನ್ನು ನೀರಿಲ್ಲದ ಬಾವಿಗೆ ಎಸೆದು ಪರಾರಿಯಾಗಿದ್ದ.

ಮರುದಿನ ಮನೆಯವರು ಮಗುವಿಗಾಗಿ ಹುಡುಕಾಟ ನಡೆಸಿದಾಗ ನೀರಿಲ್ಲದ ಬಾವಿಯಲ್ಲಿ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಗ್ರಾಮದ 6ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರವೀಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

TRENDING