Friday, January 15, 2021
Home ರಾಜಕೀಯ ಇನ್ನು 3 -4 ದಿನಗಳಲ್ಲಿ ಸಂಪುಟ ವಿಸ್ತರಣೆ : ಸಿಎಂ ಯಡಿಯೂರಪ್ಪ

ಇದೀಗ ಬಂದ ಸುದ್ದಿ

ಇನ್ನು 3 -4 ದಿನಗಳಲ್ಲಿ ಸಂಪುಟ ವಿಸ್ತರಣೆ : ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಇನ್ನು 3 -4 ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶೀಘ್ರ ಸಂಪುಟ ವಿಸ್ತರಣೆಗೆ ಅನುಮೋದನೆ ನೀಡುವಂತೆ ವರಿಷ್ಠರನ್ನು ಕೇಳುವುದಾಗಿ ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವುದು ಖಚಿತವೆಂದು ಸ್ಪಷ್ಟಪಡಿಸಿದ್ದಾರೆ. 3 -4 ದಿನದಲ್ಲಿ ಸಂಪುಟ ವಿಸ್ತರಣೆಯಾಗುತ್ತದೆ ಎನ್ನುವ ವಿಶ್ವಾಸವಿದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ವರಿಷ್ಠರೊಂದಿಗೆ ಚರ್ಚಿಸಿ ಅನುಮೋದನೆ ನೀಡುವಂತೆ ಮನವಿ ಮಾಡಲಿದ್ದು, ಶೀಘ್ರವೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

TRENDING