ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ.
ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ ಸಂಭವಿಸಿದ್ದು, ಘಾಜಿಯಾಬಾದ್ ನಿಂದ 5 ಕಿ.ಮೀ ದೂರದಲ್ಲಿ ಭೂಕಂಪನ ಸಂಭವಿಸಿದೆ ಎಂದು ಭೂಗರ್ಭ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಭೂಕಂಪನದಿಂದ ಯಾವುದೇ ಪ್ರಾಣಿಹಾನಿ ಹಾಗೂ ಆಸ್ತಿಪಾಸ್ತಿ ನಷ್ಟವಾದ ಬಗ್ಗೆ ವರದಿಯಾಗಿಲ್ಲ ಎಂದು ವರದಿಯಾಗಿದೆ.