Friday, January 15, 2021
Home ರಾಜ್ಯ ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ ರೇಷನ್ ಕಾರ್ಡ್ ವಿತರಣೆ

ಇದೀಗ ಬಂದ ಸುದ್ದಿ

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ ರೇಷನ್ ಕಾರ್ಡ್ ವಿತರಣೆ

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ಬಡ ಕುಟುಂಬಗಳಿಗೆ ಪಡಿತರ ಚೀಟಿ ವಿತರಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉದ್ದೇಶಿಸಿದ್ದು, ಬಾಕಿ ಉಳಿದಿರುವ 1,74,807 ಅರ್ಜಿದಾರ ಕುಟುಂಬಗಳಿಗೆ ಶೀಘ್ರವೇ ಪಡಿತರ ಚೀಟಿ ಒದಗಿಸುವ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

2017 ರಿಂದ ಈವರೆಗೆ 36,41,269 ಅರ್ಜಿಗಳು ಸಲ್ಲಿಕೆಯಾಗಿದ್ದು, 26,84,857 ಅರ್ಜಿಗಳಿಗೆ ಅನುಮೋದನೆ ಸಿಕ್ಕಿದ್ದು, 35,58,851 ಅರ್ಜಿಗಳು ವಿಲೇವಾರಿಯಾಗಿವೆ. 8,73,994 ಅರ್ಜಿಗಳು ತಿರಸ್ಕೃತಗೊಂಡಿಎ ಎಂದು ಆಹಾರ ಇಲಾಖೆ ಮಾಹಿತಿ ನೀಡಿವೆ.

TRENDING