Wednesday, January 27, 2021
Home ಕೋವಿಡ್-19 ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ ದಾಖಲು

ಇದೀಗ ಬಂದ ಸುದ್ದಿ

ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,652 ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ದೇಶದಲ್ಲಿ ಪ್ರಸ್ತುತ ಸೋಂಕಿತರ ಸಂಖ್ಯೆ 96,08,211ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 540 ಸಾವನ್ನಪ್ಪುವ ಮೂಲಕ ಮೃತಪಟ್ಟವರ ಸಂಖ್ಯೆ 1,39,700ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಒಂದು ದಿನದಲ್ಲಿ 42,533 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 90,58,822 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ಹಿಂತಿರುಗಿದ್ದಾರೆ. ಸದ್ಯ ದೇಶದಲ್ಲಿ 4,09,689 ಸಕ್ರಿಯ ಪ್ರಕರಣಗಳಿವೆ.

ಭಾರತದಲ್ಲಿ ಒಂದೇ ದಿನ 11,70,102 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 14,47,27,749 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

TRENDING