Friday, January 15, 2021
Home ಕೋವಿಡ್-19 ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ ಸೋಂಕಿತರ ಸಂಖ್ಯೆ

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ.

ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 65,842,942ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 1,518,560ಕ್ಕೆ ಏರಿಕೆಯಾಗಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ.

ವಿಶ್ವದ ಟಾಪ್ 10 ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,571,559ಕ್ಕೆ ಏರಿಕೆಯಾಗಿದ್ದು, ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 6,533,968ಕ್ಕೆ ತಲುಪಿದೆ,

ಇನ್ನು ಮೊದಲನೇ ಸ್ಥಾನದಲ್ಲಿರುವ ಅಮೆರಿಕಾದಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 14,772,535ಕ್ಕೆ ಏರಿಕೆಯಾಗಿದ್ದು, 285,550 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

TRENDING